ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಿದರೆ ಪ್ರಧಾನಿ ಮನೆ ಮುಂದೆ ಪ್ರತಿಭಟನೆ – ಗುರ್ನಾಮ್ ಸಿಂಗ್ ಚದುನಿ

ನವದೆಹಲಿ ನ 02 : ಕಳೆದ ಒಂದು ವರ್ಷದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ, ಇದೇ ರೀತಿ ಕೇಂದ್ರ ಸರ್ಕಾರ ಮುಂದುವರೆದರೆ ಮುಂಬರುವ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿವಾಸದ ಮುಂದೆ ಪ್ರತಿಭಟಿಸಲಾಗುವುದು ಎಂದು ಹಿರಿಯ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ ಕೇಂದ್ರ ಸರ್ಕಾರವನ್ನ ಎಚ್ಚರಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಹೆದ್ದಾರಿಗಳಲ್ಲಿ ವಾಹನ ಸಂಚಾರ್ ಸುಗಮಗೊಳಿಸಲು ದೆಹಲಿ ಪೊಲೀಸರು ಪ್ರತಿಭಟನೆ ನಡೆಯುತ್ತಿದ್ದ ಸ್ಥಳಗಳಲ್ಲಿ ಅಳವಡಿಸಿದ ಬ್ಯಾರಿಕೇಡ್ಗಳನ್ನು ತೆಗೆದು ಹಾಕಿರುವ ಹಿನ್ನೆಲೆ ಚದುನಿ ಪ್ರತಿಕ್ರಿಯಿಸಿದ್ದಾರೆ. ಕೆಲವು ರೈತ ನಾಯಕರು ಆರಂಭದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಸಮರ್ಥನೆಗೆ ಇಳಿದರೆ, ಚದುನಿ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.

ಕಳೆದ ಹಲವು ದಿನಗಳಿಂದ ಪ್ರತಿಭಟನಾ ನಿರತ ರೈತರನ್ನು ಗಡಿಗಳಿಂದ ತೆರವುಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ದೀಪಾವಳಿಗು ಮುನ್ನವೇ ರಸ್ತೆಗಳಿಂದ ಪ್ರತಿಭಟನಕಾರರನ್ನು ತೆರವುಗೊಳಿಸಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜನರು ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು.

ಪ್ರತಿಭಟನಾಕಾರರನ್ನು ರಸ್ತೆಗಳಿಂದ ತೆರವುಗೊಳಿಸಲು ಯತ್ನಿಸಿದರೆ ಈ ಬಾರಿ ದೀಪಾವಳಿಯನ್ನು ಪ್ರಧಾನಿ ಮೋದಿಯವರ ಮನೆ ಭಾಗಿಲಲ್ಲಿ ಆಚರಿಸಲಾಗುವುದು. ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದೇವೆ ಆದರು, ಸರ್ಕಾರ ನಮ್ಮಗೆ ತೊಂದರೆ ಕೊಡಲು ಮುಂದಾದರೆ ಮತ್ತು ಬಲವಂತವಾಗಿ ತೆರವುಗೊಳಿಸಲು ಪ್ರಯತ್ನಿಸಿದರೆ ದೇಶದ ರೈತರು ಮುಂದಿನ ದಿನಗಳಲ್ಲಿ ದೆಹಲಿಯನ್ನು ಪ್ರವೇಶಿಸಿ ಪ್ರತಿಭಟಿಸಲಿದ್ದಾರೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Exit mobile version