ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರೊಟೆಸ್ಟ್: ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಟ್ರ್ಯಾಕ್ಟರ್ ಪೆರೇಡ್

ಹೊಸದಿಲ್ಲಿ, ಜ. 27: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಗಣರಾಜ್ಯೋತ್ಸವ ದಿನದಂದು (ಮಂಗಳವಾರ) ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಬೃಹತ್‌ ಸಂಖ್ಯೆಯಲ್ಲಿ ದೆಹಲಿಯತ್ತ ಹೊರಟಿದ್ದಾರೆ.

ಎಲ್ಲ ಟ್ರ್ಯಾಕ್ಟರ್‌ಗಳ ಮೇಲೆ ರಾಷ್ಟ್ರ ಧ್ವಜ ಹಾಗೂ ರೈತ ಸಂಘಟನೆಗಳ ಧ್ವಜಗಳನ್ನು ಹಾಕಲಾಗಿದೆ. ರೈತರ ‘ಕಿಸಾನ್ ಗಣತಂತ್ರ ಪರೇಡ್’ನಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳು ಭಾಗವಹಿಸಿವೆ. ವ್ಯವಸ್ಥೆ ನೋಡಿಕೊಳ್ಳಲು 2,500 ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ. ಪರೇಡ್‌ನಲ್ಲಿ ಭಾಗವಹಿಸುವ ಜನಸಂಖ್ಯೆಯನ್ನು ಆಧರಿಸಿ ಸ್ವಯಂ ಸೇವಕರನ್ನು ಹೆಚ್ಚಿಸಲಾಗುತ್ತದೆ ಎಂದು ಮುಖಂಡರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಲಿರುವ ರೈತರಿಗೆ ಹಲವು ಸಲಹೆಗಳನ್ನೂ ಪ್ರಕಟಿಸಿದ್ದಾರೆ.

Exit mobile version