English English Kannada Kannada

ಸೆ. 27ಕ್ಕೆ ಭಾರತ್ ಬಂದ್

ಕೇಂದ್ರದ ಕೃಷಿ ಮಸೂದೆ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ಸರಿಸುಮಾರು 9 ತಿಂಗಳು ಕಳೆದಿದೆ. ಕೊರೋನಾ 2ನೇ ಅಲೆ ಕಾರಣ ಬೃಹತ್ ಪ್ರತಿಭಟಾನರ್ಯಾಲಿ ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ
Share on facebook
Share on google
Share on twitter
Share on linkedin
Share on print
ಸೆ 27ಕ್ಕೆ ಭಾರತ್ ಬಂದ್‌ಗೆ ಕರೆ

ಬೆಂಗಳೂರು ಸೆ 14 :    ಕೇಂದ್ರದ ಮೂರು ಕೃಷಿ ಸುಧಾರಣಾ ಕಾಯಿದೆ ವಾಪಸ್ ಪಡೆಯುವಂತೆ ಒತ್ತಾಯಿಸಿ, ರೈತ ವಿರೋಧಿ ಕೃಷಿ ಕಾಯ್ದೆಗಳ ಅನುಷ್ಠಾನ ವಿರೋಧಿಸಿ ಭಾರತ್‌ ಕಿಸಾನ್‌ ಮೋರ್ಚಾ ಸೆ.27 ರಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಬಂದ್‌ಗೆ ರಾಜ್ಯದ ಎಲ್ಲಾ ರೈತರು ಸಹಕರಿಸಿಬೇಕೆಂದು ಕುರುಬೂರು ಶಾಂತಕುಮಾರ್  ಮನವಿ ಮಾಡಿದ್ದಾರೆ.

ಈ ಬಗ್ಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ ಕೇಂದ್ರದ ಕೃಷಿ ಮಸೂದೆ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ಸರಿಸುಮಾರು 9 ತಿಂಗಳು ಕಳೆದಿದೆ. ಕೊರೋನಾ 2ನೇ ಅಲೆ ಕಾರಣ ಬೃಹತ್ ಪ್ರತಿಭಟಾನ ರ್ಯಾಲಿ ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಕರ್ನಾಟಕ ರೈತ ಸಂಘಟನೆಗಳು ಬೆಂಬಲ ಸೂಚಿಸಿದೆ ಎಂದರು

ಸೆಪ್ಟೆಂಬರ್ 27ರ ಭಾರತ್ ಬಂದ್ ದಿನ, ಕರ್ನಾಟಕದ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ರೈತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದ ಅವರು ಇದೇ ವೇಳೆ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಾಂತಕುಮಾರ್ ಹರಿಹಾಯ್ದಿದ್ದು, 9 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಮೋದಿ ರೈತರ ಸಮಸ್ಯೆ ಆಲಿಸಿಲ್ಲ ಎಂದು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Submit Your Article