ಬೆಂಗಳೂರು, ಫೆ. 23: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ ಬಗ್ಗೆ ಚಿತ್ರತಂಡದ ವಿರುದ್ಧ ಬ್ರಾಹ್ಮಣ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ ಚಿತ್ರತಂಡದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿವಾದದ ಕುರಿತು ಟ್ವೀಟ್ ಮಾಡಿರುವ ಅವರು, ಹಿಂದೂಗಳನ್ನು ಅವಮಾನಿಸುವುದು, ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ. ಬೇರೆ ಧರ್ಮಗಳನ್ನು ಅಪಮಾನ ಮಾಡುವ ಧೈರ್ಯ ನಿಮಗಿದೆಯೇ? ಹಿಂದೂ ಧರ್ಮಗಳ ಭಾವನೆಗೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರಮಂದಿರಗಳಲ್ಲಿ ‘ಪೊಗರು’ ಚಿತ್ರದ ಪ್ರದರ್ಶನ ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.
It has become a fashion to humiliate Hindus & take a ride on our sentiments.
— Shobha Karandlaje (@ShobhaBJP) February 23, 2021
Whether they have guts to portray other religions in this manner?
Screening of #Pogaru film has to be stopped until such objectable scenes are censored.
Hurting Hindu emotions can't be ignored. pic.twitter.com/H6RYijonoK