ವರದಕ್ಷಿಣೆ ಪದ್ಧತಿಯ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸುವ ಸಲುವಾಗಿ ಕೇರಳ ರಾಜ್ಯಪಾಲರಿಂದ ಉಪವಾಸ ಸತ್ಯಾಗ್ರಹ

ಕೇರಳ, ಜು. 14: ವರದಕ್ಷಿಣೆ ಪದ್ಧತಿಯ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸಲು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಉದ್ದೇಶದೊಂದಿಗೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಲ್ಲಿನ ರಾಜಭವನದ ತಮ್ಮ ಅಧಿಕೃತ ನಿವಾಸದಲ್ಲಿ ಬುಧವಾರ ಬೆಳಿಗ್ಗೆಯಿಂದ ಒಂದು ದಿನದ ಉಪವಾಸ ಆರಂಭಿಸಿದರು.

‌‌‌ಗಾಂಧಿ ಸ್ಮಾರಕ ನಿಧಿ ಮತ್ತಿತರ ಸಂಘಟನೆಗಳ ಸಹಯೋಗದವರು ಕರೆ ನೀಡಿದ್ದ ವರದಕ್ಷಿಣೆ ಪದ್ಧತಿ ವಿರುದ್ಧದ ಸಾಮಾಜಿಕ ಜಾಗೃತಿ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿ ಅವರು ಈ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.‌

ಬೆಳಿಗ್ಗೆ 8 ಗಂಟೆಯಿಂದ ರಾಜ್ಯಪಾಲರು ಉಪವಾಸ ಆರಂಭಿಸಿದ್ದು, ಸಂಜೆ 6ರವರೆಗೆ ಮುಂದುವರಿಸುತ್ತಾರೆ. ಇದೇ ವೇಳೆ ಗಾಂಧಿ ಭವನದಲ್ಲೂ ಕೆಲವೊಂದು ಗಾಂಧಿ ಅನುಯಾಯಿ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆಯಿಂದ ಉಪವಾಸ ಆರಂಭಿಸಿದ್ದಾರೆ.

Exit mobile version