ಆಧುನಿಕ ಯುಗದ ಗ್ರಾಫಿಕ್‌ಗೆ ಬಲಿಪಶು ಆಗುವ ಭಯ ನಮಗೆ ಕಾಡುತ್ತಿದೆ : ಸಿ.ಪಿ.ಯೋಗೇಶ್ವರ್

ಮೈಸೂರು, ಮಾ. 08: ಆಧುನಿಕ ಯುಗದ ಗ್ರಾಫಿಕ್‌ಗೆ ಬಲಿಪಶು ಆಗುವ ಭಯ ನಮಗೆ ಕಾಡುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಅವರು, ಇದು ಗ್ರಾಫಿಕ್ ಯುಗ, ದೃಶ್ಯ ಮಾಧ್ಯಮಗಳನ್ನು ತಿರುಚುವ, ಧ್ವನಿ‌ ನೀಡುವ ಕೆಲಸ ಆಗುತ್ತಿದೆ. ಇದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ. ಗ್ರಾಫಿಕ್ ಮೂಲಕ ಕೈ ಕಾಲು ತಲೆ ಕತ್ತರಿಸಿದಂತೆ ಮಾಡಬಹುದು. ಸಿನಿಮಾದಿಂದ ಬಂದ ನನಗೆ ಅದೆಲ್ಲಾ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದರು.

ಸುಳ್ಳು ಬೇಗ ಹರಡುತ್ತದೆ. ಆದರೆ ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ ಮಾಧ್ಯಮದಲ್ಲಿ ಬಂದ ಕೂಡಲೇ ಜನರು ಅದನ್ನು ನಿಜ ಎಂದು ನಂಬುತ್ತಾರೆ. ಆದರೆ ಸತ್ಯ ಹೊರಬರುವುದು ಕೇವಲ ಪೊಲೀಸ್ ತನಿಖೆ, ನ್ಯಾಯಲಯದ ಮೂಲಕ. ಈ ಹಿನ್ನೆಲೆಯಲ್ಲಿ ಇದಕ್ಕೆ ನಾವೆಲ್ಲಾ ಭಯಪಡುತ್ತಿದ್ದೇವೆ ಎಂದು ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಆರು ಸಚಿವರು ಕೋರ್ಟ್ ಮೊರೆ ಹೋಗರುವ ನಡೆಯ ಬಗ್ಗೆ ಸ್ಪಷನೆ ನೀಡಿದರು.

Exit mobile version