ಕೊರೊನಾದಿಂದ ಗುಣಮುಖರಾದವರಿಗೆ ಕ್ಷಯದ ಭಯ !

ಬೆಂಗಳೂರು ಆ 17 : ಕೊರೊನಾ ದಾಳಿಯಿಂದಾಗಿ ಒಂದೆಡೆ ಜನರು ಪರದಾಡುತ್ತಿದ್ದರೆ ಇನ್ನೊಂದೆಡೆ ಕೊರೊನಾದಿಂದ ಗುಣಮುಖರಾದವರಿಗೆ ಮತ್ತೊಂದು ಭೀತಿ ಎದುರಾಗಿದೆ

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ. ಸುಧಾಕರ್ ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಕ್ಷಯರೋಗ ಕಾಣಿಸಿಕೊಳ್ಳುತ್ತಿದೆ ಎಂಬ ಅಘಾತಕಾರಿ ಅಂಶವನ್ನು ಹೊರಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 16 ರಿಂದ 30ರ ವರೆಗೆ ಕೊರೊನಾದಿಂದ ಗುಣಮುಖರಾದವರಿಗೆ ಕ್ಷಯರೋಗ ಪತ್ತೆ ಪರೀಕ್ಷೆ ಮಾಡಲಾಗುತ್ತಿದೆ ಎಂದಿದ್ದಾರೆ. ಕಳೆದ 2 ವರ್ಷಗಳಿಂದ ಕ್ಷಯ ರೋಗದ ಪ್ರಮಾಣ ಹೆಚ್ಚಾಗಿದ್ದು, ಕಳೆದ 2 ವರ್ಷಗಳಲ್ಲಿ ಕ್ಷಯರೋಗದ ಪ್ರಮಾಣ ಶೇ 33% ಅಷ್ಟು ಹೆಚ್ಚಾಗಿದ್ದು ಈ ಮೊದಲು ಯಾವ ವೃತ್ತಿಯವರಿಗೆ ಈ ರೋಗ ಬರುತ್ತದೆ ಎಂಬುದನ್ನು ನೋಡಿ ತಪಾಸಣೆ ಮಾಡಲಾಗುತ್ತಿತ್ತು. ಆದರೆ ಈಗ ಕೊವಿಡ್‌ನಿಂದ ಗುಣಮುಖರಾದವರ ತಪಾಸಣೆ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ 28 ಲಕ್ಷ ಜನರು ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಕೊಳ್ಳಬೇಕು. ಆರಭದಲ್ಲಿ ಕ್ಷಯ ರೋಗ ಪತ್ತೆಯಾದರೆ ಚಿಕಿತ್ಸೆ ನೀಡಲು ಅನುಕೂಲ ಎಂದು ಸುಧಾಕರ್ ಮನವಿ ಮಾಡಿದ್ದಾರೆ.

ಇವರಗೆ ರಾಜ್ಯದಲ್ಲಿ 28 ಲಕ್ಷ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆದರೆ ಕ್ಷಯ ರೋಗ ಮತ್ತು ಕೊರೊನಾ 2 ಕೂಡ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗವಾಗಿದ್ದು ಹೀಗಾಗಿ ಕ್ಷಯ ವ್ಯಾಪಕವಾಗಿ ಹರಡದಂತೆ ತಡೆಯಲು ತಪಾಸಣಾ ಶಿಭಿರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Exit mobile version