ಶಾಲಾ ದಾಖಲಾತಿಗೂ ಮುನ್ನವೇ (Fee hike in private schools ) ಶುಲ್ಕ ಏರಿಕೆ ವಿವಾದ
ಪ್ರವೇಶ ನಿಯಮ ಬದಲಾವಣೆ ಮತ್ತು ಶುಲ್ಕ ಏರಿಕೆ ಪರಿಣಾಮ ಪೋಷಕರಿಗೆ ತಲೆನೋವು
ಖಾಸಗಿ ಶಾಲೆಗಳ ವಿರುದ್ಧ ಪೋಷಕರ ಆಕ್ರೋಶ ಹೆಚ್ಚಳ
Bengaluru: ಬೆಂಗಳೂರು ನಗರದಲ್ಲಿ 2026–27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ (Fee hike in private schools) ಮುನ್ನವೇ ಪೋಷಕರಿಗೆ ದೊಡ್ಡ ಸಂಕಷ್ಟ ಎದುರಾಗಿದೆ.
ಒಂದೆಡೆ ಮೊದಲ ತರಗತಿ ಪ್ರವೇಶಕ್ಕೆ ಸಂಬಂಧಿಸಿದ ವಯೋಮಿತಿ ನಿಯಮದ ಗೊಂದಲ ಪೋಷಕರನ್ನು ಸಂಕಷ್ಟಕ್ಕೆ ದೂಡಿದರೆ, ಇನ್ನೊಂದೆಡೆ ಖಾಸಗಿ ಶಾಲೆಗಳು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿರುವುದು ಪೋಷಕರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.

ಈಗಾಗಲೇ ಶಿಕ್ಷಣ ವೆಚ್ಚ ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿ ಈ ಹೊಸ ಶುಲ್ಕ ಏರಿಕೆ ಪೋಷಕರಿಗೆ ಆರ್ಥಿಕ ಒತ್ತಡವನ್ನು ಉಂಟುಮಾಡುತ್ತಿದೆ.
ಹೊಸ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಕೆಲವು ಖಾಸಗಿ ಶಾಲೆಗಳು ಶುಲ್ಕವನ್ನು ಹೆಚ್ಚಿಸಿರುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪೋಷಕರ ಹೇಳಿಕೆಯ ಪ್ರಕಾರ, ಕೆಲವು ಶಾಲೆಗಳು 5 ರಿಂದ 10 ಶೇಕಡಾ ವರೆಗೆ, ಇನ್ನೂ ಕೆಲವು ಶಾಲೆಗಳು 10 ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಳ ಮಾಡಿವೆ.
ಶಾಲೆಗಳು ವಿವಿಧ ಕಾರಣಗಳನ್ನು ನೀಡಿ ಪ್ರತಿ ವರ್ಷವೂ (Fee hike in private schools) ಶುಲ್ಕ ಹೆಚ್ಚಿಸುತ್ತಿರುವುದರಿಂದ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಒಂದು ಮೂಲಭೂತ ಹಕ್ಕಾಗಿದ್ದು, ಅದು ವ್ಯಾಪಾರವಾಗಬಾರದು ಎಂಬ ಅಭಿಪ್ರಾಯವನ್ನು ಪೋಷಕರು ವ್ಯಕ್ತಪಡಿಸುತ್ತಿದ್ದಾರೆ.
ಇನ್ನೊಂದೆಡೆ, ಮೊದಲ ತರಗತಿ ಪ್ರವೇಶಕ್ಕೆ ಸಂಬಂಧಿಸಿದ ವಯೋಮಿತಿ ನಿಯಮದಲ್ಲಿ ಸರ್ಕಾರ ಮಾಡಿದ ಸಡಿಲಿಕೆ ಮತ್ತೊಂದು ಸಮಸ್ಯೆಗೆ ಕಾರಣವಾಗಿದೆ.
ಈ ವರ್ಷ ಸರ್ಕಾರ ಕೇವಲ 60 ದಿನಗಳ ವಯೋಮಿತಿ ಸಡಿಲಿಕೆ ನೀಡಿರುವುದರಿಂದ ಅನೇಕ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಳೆದ ವರ್ಷ ಇದ್ದಂತೆ 5.5 ವರ್ಷದ ವಯೋಮಿತಿಯನ್ನು ಮುಂದುವರಿಸಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.
ಇಲ್ಲವಾದರೆ ಮಕ್ಕಳನ್ನು ಮತ್ತೆ ಯುಕೆಜಿ ತರಗತಿಯನ್ನು ಪುನರಾವರ್ತನೆ ಮಾಡಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ಪೋಷಕರು ಮತ್ತೊಮ್ಮೆ ಹೆಚ್ಚಿನ ಶುಲ್ಕವನ್ನು ಕಟ್ಟಬೇಕಾಗುತ್ತದೆ ಎಂಬ ಆತಂಕ ವ್ಯಕ್ತವಾಗಿದೆ.
ಪೋಷಕರ ಸಮನ್ವಯ ಸಮಿತಿಯ ಸದಸ್ಯರು ಸರ್ಕಾರದ ಗಮನಕ್ಕೆ ಈ ಸಮಸ್ಯೆಯನ್ನು ತಂದಿದ್ದು, ಖಾಸಗಿ ಶಾಲೆಗಳ ಶುಲ್ಕ ಏರಿಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು
ಎಂದು ಒತ್ತಾಯಿಸಿದ್ದಾರೆ. ತಮಿಳುನಾಡಿನಲ್ಲಿ ಇರುವಂತೆ ಶುಲ್ಕ ನಿಯಂತ್ರಣ ಸಮಿತಿಯನ್ನು ರಚಿಸಿ ಖಾಸಗಿ ಶಾಲೆಗಳ ಶುಲ್ಕವನ್ನು ನಿಯಂತ್ರಿಸಬೇಕು ಎಂದು ಅವರು ಹೇಳಿದ್ದಾರೆ.
ಇಲ್ಲವಾದರೆ ಪ್ರತಿ ವರ್ಷವೂ ಶಾಲೆಗಳು ತಮ್ಮ ಇಚ್ಛೆಯಂತೆ ಶುಲ್ಕ ಹೆಚ್ಚಿಸುತ್ತಾ ಹೋಗುತ್ತವೆ ಮತ್ತು ಇದರಿಂದ ಮಧ್ಯಮ ವರ್ಗದ ಕುಟುಂಬಗಳು ಹೆಚ್ಚು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಪೋಷಕರು ತಿಳಿಸಿದ್ದಾರೆ.
ಒಟ್ಟಾರೆ, ಒಂದೆಡೆ ಶಾಲಾ ಪ್ರವೇಶದ ವಯೋಮಿತಿ ಗೊಂದಲ ಮತ್ತು ಮತ್ತೊಂದೆಡೆ ಖಾಸಗಿ ಶಾಲೆಗಳ ಶುಲ್ಕ ಏರಿಕೆ ಪೋಷಕರಿಗೆ ಡಬಲ್ ಶಾಕ್ ಆಗಿದೆ.
ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸ್ಪಷ್ಟ ಮಾರ್ಗಸೂಚಿ ನೀಡಬೇಕು ಹಾಗೂ ಶುಲ್ಕ ನಿಯಂತ್ರಣ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬುದು ಪೋಷಕರ ಆಗ್ರಹವಾಗಿದೆ. ಮಕ್ಕಳ ಶಿಕ್ಷಣದ ವಿಷಯದಲ್ಲಿ ಪೋಷಕರು ಆತಂಕದಲ್ಲಿದ್ದು, ಸರ್ಕಾರ ಮತ್ತು ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಂಡು ಪೋಷಕರಿಗೆ ನ್ಯಾಯ ಒದಗಿಸಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.
ಇದನ್ನು ಓದಿ : https://vijayatimes.com/epf-esi-benefits-to-unorganized-workers/