Visit Channel

ಅಂದು ಹೋರಾಟ, ಇಂದು ಜಿಂದಾಲ್‌ಗೆ ಭೂಮಿ ಮಾರಾಟ: ಸರ್ಕಾರದ ವಿರುದ್ಧ ಎಚ್ಡಿಕೆ ಕಿಡಿ

mcms

ಬೆಂಗಳೂರು, ಏ. 27: ಒಂದು ಕಾಲದಲ್ಲಿ ಜಿಂದಾಲ್‌ಗೆ ಭೂಮಿ ನೀಡುವುದನ್ನು ವಿರೋಧಿಸಿ ಭಾರೀ ಹೋರಾಟ ನಡೆಸಿದ್ದ ಬಿಜೆಪಿ, ಇಂದು ಸದ್ದಿಲ್ಲದೆ ಭೂಮಿ ಮಾರಾಟ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ?

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ಅನ್ನು’ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ?

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ?

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ.

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.