ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು ಡಿ 2 : ಕನ್ನಡ ಚಿತ್ರರಂಗದ ಹಿರಿಯ ನಟ  ಶಿವರಾಂ(84) ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದು ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಅಯ್ಯಪ್ಪ ಪೂಜೆ ಮಾಡುವಾಗ ಬಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಕೂಡಲೇ ಕುಟುಂಬಸ್ಥರು ಪ್ರಶಾಂತ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ನಟ ಶಿವರಾಂ ಪುತ್ರ ರವಿಶಂಕರ್, ‘‘ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೊನ್ನೆ ರಾತ್ರಿಯೇ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರುವುದು ಪತ್ತೆಯಾಗಿತ್ತು. ಹೀಗಾಗಿ ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದ್ದರು. ಅದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ’’ ಎಂದು ಹೇಳಿದ್ದಾರೆ. ಶರಪಂಜರ ಖ್ಯಾತಿಯ ಶಿವರಾಂ ಆರೋಗ್ಯ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಡಾ. ರಾಜ್ ಕುಮಾರ್ ಮತ್ತು ವಿಷ್ಣುವರ್ಧನ್ ಅವರು ಶಿವರಾಂ ಆಪ್ತರಾಗಿದ್ದರು.

ಶಿವರಾಂ ಕಳೆದ ಆರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಅವರು ಶರಪಂಜರ ಶಿವರಾಂ ಎಂದು ಪ್ರಖ್ಯಾತಿ ಪಡೆದಿದ್ದರು.

Exit mobile version