• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಂಚಾರ ನಿಯಮ ಉಲ್ಲಂಘನೆಗೆ ಬ್ರೇಕ್ ಹಾಕಲು ಕಠಿಣ ಕ್ರಮ: 4 ವರ್ಷಗಳಲ್ಲಿ 5.67 ಕೋಟಿ ಪ್ರಕರಣ, ₹2,361.75 ಕೋಟಿ ದಂಡ ಸಂಗ್ರಹ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಂಚಾರ ನಿಯಮ ಉಲ್ಲಂಘನೆಗೆ ಬ್ರೇಕ್ ಹಾಕಲು ಕಠಿಣ ಕ್ರಮ: 4 ವರ್ಷಗಳಲ್ಲಿ 5.67 ಕೋಟಿ ಪ್ರಕರಣ, ₹2,361.75 ಕೋಟಿ ದಂಡ ಸಂಗ್ರಹ
0
SHARES
18
VIEWS
Share on FacebookShare on Twitter

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ (fine collection for traffic rules breaking) ಹುಷಾರ್: ದಾಖಲೆ ಮಟ್ಟದಲ್ಲಿ ಕೇಸ್, ದಂಡ ವಸೂಲಿ

ನಾಲ್ಕು ವರ್ಷಗಳಲ್ಲಿ 5.67 ಕೋಟಿ ಉಲ್ಲಂಘನೆ ಪ್ರಕರಣ; ದಂಡದ ಮೊತ್ತ ರಸ್ತೆ ಸುರಕ್ಷತೆಗೂ ಬಳಕೆ

ಸಂಚಾರ ಶಿಸ್ತು ಕಾಪಾಡಲು ಕಠಿಣ ಕಾನೂನು ಕ್ರಮ; ಜಾಗೃತಿ ಕಾರ್ಯಕ್ರಮಗಳಿಗೂ ಒತ್ತು

Bengaluru : ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ( fine collection for traffic rules breaking) ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದರೂ, ನಿಯಮ ಮೀರುವವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ.

ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ, ವಿವಿಧ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಆದರೂ ವಾಹನ ಸವಾರರು ನಿಯಮ ಪಾಲನೆಗೆ ಹೆಚ್ಚಿನ ಆದ್ಯತೆ ನೀಡದಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಬರೋಬ್ಬರಿ 5.67 ಕೋಟಿ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ನಿಯಮ ಉಲ್ಲಂಘಿಸಿದವರಿಂದ ಒಟ್ಟು ₹2,361.75 ಕೋಟಿ ದಂಡ ವಸೂಲಿ ಮಾಡಲಾಗಿದೆ.

fine collection for traffic rules breaking

ಸಂಚಾರ ನಿಯಮಗಳನ್ನು ಉಲ್ಲಂಘಿಸುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ನಿಯಮ ಪಾಲನೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳ ಅಂಕಿ-ಅಂಶಗಳನ್ನು ಗಮನಿಸಿದರೆ, ಪ್ರತಿವರ್ಷವೂ ಕೋಟ್ಯಂತರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿರುವುದು ಸ್ಪಷ್ಟವಾಗುತ್ತದೆ.

2023ರಲ್ಲಿ 1.27 ಕೋಟಿ ಪ್ರಕರಣಗಳು, 2024ರಲ್ಲಿ 1.61 ಕೋಟಿ ಪ್ರಕರಣಗಳು, 2025ರಲ್ಲಿ 1.60 ಕೋಟಿ ಪ್ರಕರಣಗಳು ದಾಖಲಾಗಿವೆ.

ಇನ್ನು 2026ರಲ್ಲಿ 1.17 ಕೋಟಿ ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ನಾಲ್ಕು (fine collection for traffic rules breaking) ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ 5.67 ಕೋಟಿಗೆ

ತಲುಪಿದೆ. ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರ ಜತೆಗೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಪ್ರವೃತ್ತಿಯೂ ಮುಂದುವರಿದಿದೆ.

ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು, ಸಂಚಾರ ನಿಯಮಗಳನ್ನು ನಿರ್ಲಕ್ಷಿಸುವುದು ಸೇರಿದಂತೆ ವಿವಿಧ ರೀತಿಯ ಉಲ್ಲಂಘನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ನಿಯಮ ಉಲ್ಲಂಘನೆ ಪ್ರಕರಣಗಳ ಜತೆಗೆ ದಂಡ ಸಂಗ್ರಹದಲ್ಲಿಯೂ ದೊಡ್ಡ ಮೊತ್ತ ದಾಖಲಾಗಿದೆ. 2023ರಲ್ಲಿ ₹684.76 ಕೋಟಿ, 2024ರಲ್ಲಿ ₹915.95 ಕೋಟಿ, 2025ರಲ್ಲಿ ₹91.64 ಕೋಟಿ ಹಾಗೂ 2026ರಲ್ಲಿ ₹669.39 ಕೋಟಿ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಮೋಟಾರು ವಾಹನ ಅಧಿನಿಯಮದ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುತ್ತಿದೆ.

ನಿಯಮಗಳನ್ನು ಪದೇಪದೆ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಇಂತಹ ತಪ್ಪುಗಳು ಮರುಕಳಿಸದಂತೆ ತಡೆಯುವ ಉದ್ದೇಶವನ್ನು ಇಲಾಖೆ

ಹೊಂದಿದೆ. ಕೇವಲ ದಂಡ ವಸೂಲಿ ಮಾಡುವುದಕ್ಕಿಂತಲೂ ವಾಹನ ಸವಾರರಲ್ಲಿ ಜವಾಬ್ದಾರಿಯುತ ಚಾಲನೆಯ ಅರಿವು ಮೂಡಿಸುವುದಕ್ಕೆ ಆದ್ಯತೆ ನೀಡಲಾಗುತ್ತಿದೆ.

ಸಂಚಾರ ನಿಯಮಗಳ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ

ಸಂಚಾರ ನಿಯಮ ಪಾಲನೆಯ ಅಗತ್ಯ ಮತ್ತು ನಿಯಮ ಉಲ್ಲಂಘನೆಯಿಂದ ಉಂಟಾಗಬಹುದಾದ ಅಪಾಯಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರು, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ಚಾಲಕರು, ಶಾಲಾ ವಾಹನಗಳ ಚಾಲಕರು ಸೇರಿದಂತೆ ವಿವಿಧ ವರ್ಗದ ವಾಹನ ಚಾಲಕರಿಗೂ ಅರಿವು ಮೂಡಿಸಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಂ ಮೂಲಕವೂ ಸಂಚಾರ ನಿಯಮ ಪಾಲನೆಯ ಮಹತ್ವವನ್ನು ಜನರಿಗೆ ತಲುಪಿಸಲಾಗುತ್ತಿದೆ.

ನಿಯಮ ಉಲ್ಲಂಘನೆಯ ಪರಿಣಾಮಗಳ ಕುರಿತು ಪೋಸ್ಟರ್‌ಗಳು ಹಾಗೂ ಇತರ ಜಾಗೃತಿ ವಿಷಯಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಗೃಹ ಇಲಾಖೆ ತಿಳಿಸಿದೆ.

ಇನ್ನು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಂದ ಸಂಗ್ರಹವಾಗುವ ದಂಡದ ಹಣವನ್ನು ಸಂಚಾರ ಪೊಲೀಸ್ ವಿಭಾಗವೇ ನೇರವಾಗಿ ಬಳಸಿಕೊಳ್ಳುವುದಿಲ್ಲ. ಪ್ರತಿ ಸಂಚಾರ ಠಾಣೆಯಲ್ಲಿ ಸಂಗ್ರಹವಾಗುವ ದಂಡದ ಮೊತ್ತವನ್ನು ಸರ್ಕಾರದ ಸಂಚಾರ ನಿಯಮ ಉಲ್ಲಂಘನೆ ದಂಡಗಳ ಲೆಕ್ಕ ಶೀರ್ಷಿಕೆಗೆ ಜಮೆ ಮಾಡಲಾಗುತ್ತದೆ.

ಸರ್ಕಾರಿ ಆದೇಶದಂತೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಂದ ಸಂಗ್ರಹವಾಗುವ ದಂಡದ ಶೇ.50ರಷ್ಟು ಮೊತ್ತವನ್ನು ರಸ್ತೆ ಸುರಕ್ಷತೆಗಾಗಿ ವ್ಯಯ ಮಾಡಲಾಗುತ್ತಿದೆ.

ಹೀಗಾಗಿ ದಂಡ ವಿಧಿಸುವ ಕ್ರಮದ ಜತೆಗೆ ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕರಲ್ಲಿ ಸಂಚಾರ ಶಿಸ್ತು ಬೆಳೆಸುವ ಪ್ರಯತ್ನವೂ ಮುಂದುವರಿದಿದೆ. ಕೋಟ್ಯಂತರ ಪ್ರಕರಣಗಳು

ದಾಖಲಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ವಾಹನ ಸವಾರರು ಸ್ವಯಂಪ್ರೇರಿತರಾಗಿ ನಿಯಮ ಪಾಲನೆ ಮಾಡುವ ಮೂಲಕ ರಸ್ತೆ ಸುರಕ್ಷತೆಗೆ ಕೈಜೋಡಿಸುವ ಅಗತ್ಯವಿದೆ.

Tags: bengaluru

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.