ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು!

Bengaluru: ಲೋಕಸಭಾ ಚುನಾವಣಾ ಸಮಯದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ (B S Yediyurappa) ಸಂಕಷ್ಟವೊಂದು ಎದುರಾಗಿದೆ. ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೆಬ್ರುವರಿ (February) 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ (FIR) ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.ಪೋಕ್ಸೋ ಪ್ರಕರಣದಲ್ಲಿ ದಾಖಲಾದರೆ.

ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ‌ ಬಂಧಿಸಬೇಕು. ನಂತರ ತನಿಖೆ‌ ನಡೆಸಬೇಕೆಂದು ಕಾನೂನಿನಲ್ಲಿ ಹೇಳಿರುವುದಾಗಿ ತಜ್ಞರು ಹೇಳುತ್ತಾರೆ. ಹೀಗಾಗಿ, ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಗಳಿವೆ. ತನ್ನ ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್‌ ಐಟಿ ಗೆ (SIT) ವಹಿಸುವಂತೆ ಆಗ್ರಹಿಸಿ

ಫೆಬ್ರವರಿ 2 ರಂದು ಯಡಿಯೂರಪ್ಪ ಅವರ ಬಳಿ ತಾನು ಮತ್ತು ಮಗಳು ತೆರಳಿದ್ದ ವೇಳೆ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು 17 ವರ್ಷದ ಅಪ್ರಾಪ್ತೆಯ ತಾಯಿ, ಬೆಂಗಳೂರಿನ (Bengaluru) ಸದಾಶಿವ ನಗರದ ಪೋಲಿಸರಿಗೆ ದೂರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಗುರುವಾರ ಸಂಜೆ 6 ಗಂಟೆಯ ವೇಳೆಗೆ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಲು ನೋಡಿದರೆ ಪ್ರಭಾವಿ ರಾಜಕಾರಣಿಗಳಾದ ಕಾರಣ ತಡ ರಾತ್ರಿ 12 ಗಂಟೆಯ ವೇಳೆಗೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಎಂದು ಅಪ್ರಾಪ್ತೆಯ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

Exit mobile version