ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಿಸಿದ ಕಾನೂನು ವಿದ್ಯಾರ್ಥಿ ; FIR ದಾಖಲು

Bengaluru : ಬೆಂಗಳೂರಿನ ಕಾನೂನು ಕಾಲೇಜಿನ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯರ ಶೌಚಾಲಯಕ್ಕೆ(FIR On Bengaluru Law Student) ಇಣುಕಿ ನೋಡಿದ್ದಾನೆ ಮತ್ತು ಅವರ ಖಾಸಗಿ ವೀಡಿಯೊಗಳನ್ನು(Obscene Videos) ರೆಕಾರ್ಡ್ ಮಾಡಿಕೊಂಡಿರುವ ಆರೋಪದ ಮೇಲೆ ಸದ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: https://vijayatimes.com/kantara-inspires-govt-officer/

ಬೆಂಗಳೂರು ನಗರದ ಹೊಸಕೆರೆಹಳ್ಳಿಯ(Hoskerehalli) ಖಾಸಗಿ ವಿಶ್ವವಿದ್ಯಾಲಯದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯನ್ನು 21 ವರ್ಷದ ಶುಭಂ ಎಂ. ಆಜಾದ್ ಎಂದು ಗುರುತಿಸಲಾಗಿದೆ.

ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಆಡಳಿತ ಮಂಡಳಿ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಶುಭಂ ವಿರುದ್ಧ ಎಫ್‌ಐಆರ್(FIR On Bengaluru Law Student) ದಾಖಲಿಸಿದ್ದಾರೆ.

ಪೊಲೀಸರು ಆರೋಪಿ ಶುಭಂ ಬಳಿಯಿದ್ದ ಲ್ಯಾಪ್‌ಟಾಪ್, ಮೊಬೈಲ್ ಮತ್ತು ಐಪ್ಯಾಡ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ದಕ್ಷಿಣ ಡಿಸಿಪಿ ಪಿ ಕೃಷ್ಣಕಾಂತ್ ಸುದ್ದಿ ಸಂಸ್ಥೆ ಎಎನ್‌ಐಗೆ(ANI) ತಿಳಿಸಿದ್ದಾರೆ.

ಆತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗುವುದು.

https://fb.watch/gYidvj4I1B/ ಪ್ರವಾಸೋದ್ಯಮ ಇಲಾಖೆಯವರಿಗೆ ಮೊದಲು ಮಾಡಿರುವುದನ್ನು ಸರಿಪಡಿಸುವ ಯೋಗ್ಯತೆ ಇಲ್ಲ!

ಈ ಪ್ರಕರಣದ ಬಗ್ಗೆ ಮಾತನಾಡಿರುವ ಪೊಲೀಸ್ ಇಲಾಖೆ, ಆರೋಪಿ ಶುಭಂ ಬಾಲಕಿಯರ ಶೌಚಾಲಯದಲ್ಲಿ ಇಣುಕಿ ನೋಡುವುದನ್ನು ಅಭ್ಯಾಸ ಮಾಡಿಕೊಂಡಿದ್ದನು ಎನ್ನಲಾಗಿದೆ.

ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಪ್ರಸಾರ ಮಾಡುತ್ತಿದ್ದ ಎನ್ನಲಾಗಿದೆ.

ಶುಭಂ ಈ ಹಿಂದೆಯೂ ಒಮ್ಮೆ ಈ ರೀತಿಯೇ ಸಿಕ್ಕಿಬಿದ್ದಿದ್ದನು. ಆದರೆ ಅವನು ಕ್ಷಮೆಯಾಚಿಸುವ ಪತ್ರವನ್ನು ಬರೆದ ನಂತರ ಎಚ್ಚರಿಕೆ ನೀಡಿ ಕ್ಷಮಿಸಲಾಗಿತ್ತು ಎಂದು ಹೇಳಲಾಗಿದೆ.

ಆದಾಗ್ಯೂ, ಈಗ ಮತ್ತೊಮ್ಮೆ ಅದೇ ರೀತಿಯ ಕೃತ್ಯವನ್ನು ಪುನಃ ಮಾಡಿರುವುದು ಅಕ್ಷಮ್ಯ!

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವೀಡಿಯೋ ರೆಕಾರ್ಡ್ ಮಾಡುತ್ತಿರುವಾಗ ಶುಭಂ ವಿದ್ಯಾರ್ಥಿಗಳ ಕಣ್ಣಿಗೆ ಸಿಕ್ಕಿಬಿದ್ದಿದ್ದಾನೆ, ನಂತರ ಅವರ ವಿಶ್ವವಿದ್ಯಾಲಯದ ಅಧಿಕಾರಿಗಳ ಬಳಿ ಹೋಗಿ ಈ ಘಟನೆ ಬಗ್ಗೆ ವಿವರಿಸಿದ್ದಾರೆ.

ಬಳಿಕ ಆರೋಪಿ ಬಗ್ಗೆ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.

ವಿದ್ಯಾರ್ಥಿನಿಯರ ಶೌಚಾಲಯದೊಳಗೆ ಚಿತ್ರೀಕರಿಸಲಾದ ಅಶ್ಲೀಲ ವಿಡಿಯೋಗಳನ್ನು ನೋಡುವ ಚಟ ಶುಭಮ್‌ಗೆ ಇತ್ತು ಮತ್ತು ಆತನ ಲ್ಯಾಪ್‌ಟಾಪ್ ಮತ್ತು ಫೋನ್ ಗ್ಯಾಲರಿಯೊಳಗೆ ಅವೇ ತುಂಬಿತ್ತು ಎಂಬ ವರದಿಯನ್ನು ಸುದ್ದಿಪತ್ರಿಕೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ : https://vijayatimes.com/talia-sinott-eats-biscuits-as-food/

ಸದ್ಯ ಈ ಪ್ರಕರಣ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳನ್ನು ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

Exit mobile version