ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ (fir on Sreesanth) ಅವರು, ತಮ್ಮ ಆಟದ ವೃತ್ತಿಜೀವನಕ್ಕಿಂತ ಹೆಚ್ಚಾಗಿ ಅನೇಕ ವಿವಾದಗಳಿಂದ ಸಾಕಷ್ಟು ಚರ್ಚೆಗೆ ಒಳಗಾಗಿದ್ದು, ಇದೀಗ ಮತ್ತೊಮ್ಮೆ ಹೊಸ
ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಕೇರಳ ಪೊಲೀಸರು ಇವರ ಮೇಲೆ ಮತ್ತು ಇತರ ಇಬ್ಬರ ವಿರುದ್ಧ ಎಫ್ಐಆರ್ (FIR) ದಾಖಲು ಮಾಡಿದ್ದಾರೆ.
ಟೀಂ ಇಂಡಿಯಾದ (Team India) ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ವಿರುದ್ಧ ವಂಚನೆ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಮತ್ತೊಮ್ಮೆ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.
ಕೇರಳ ಪೊಲೀಸರು ಎಸ್. ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಎಫ್ಐಆರ್ (FIR) ದಾಖಲು ಮಾಡಿದ್ದು, ಸಿಕ್ಕಿರುವ ಮಾಹಿತಿಯ ಪ್ರಕಾರ, ಕೇರಳದ ಕಣ್ಣೂರು ಜಿಲ್ಲೆಯ ವ್ಯಕ್ತಿಯೊಬ್ಬರು ಎಸ್.ಶ್ರೀಶಾಂತ್
ಮತ್ತು ಇತರ ಇಬ್ಬರ ವಿರುದ್ಧ ವಂಚನೆ ದೂರು (fir on Sreesanth) ದಾಖಲಿಸಿದ್ದಾರೆ.
ಇದೇ ದೂರಿನ ಆಧಾರದ ಮೇಲೆ ಪೊಲೀಸರು ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಈ ಪ್ರಕರಣದಲ್ಲಿ ಶ್ರೀಶಾಂತ್ನನ್ನು ಮೂರನೇ ಆರೋಪಿ ಎಂದು ಘೋಷಿಸಲಾಗಿದೆ ಎಂದು
ಪೊಲೀಸರು ತಿಳಿಸಿದ್ದಾರೆ.
ಪ್ರಕರಣ:
ಕಣ್ಣೂರು ಜಿಲ್ಲೆಯ ಚುಂಡಾ ನಿವಾಸಿ ಸರೀಷ್ ಗೋಪಾಲನ್ ಎಂಬುವರು ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದು, 25 ಏಪ್ರಿಲ್ 2019 ರಿಂದ ಇಲ್ಲಿಯವರೆಗೆ ಆರೋಪಿಗಳಾದ
ರಾಜೀವ್ ಕುಮಾರ್ (Rajeev Kumar) ಮತ್ತು ವೆಂಕಟೇಶ್ ಕಿಣಿ ಇಬ್ಬರೂ ನನ್ನಿಂದ ಒಟ್ಟು 18.70 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ದೂರುದಾರರ ಹೇಳಿಕೆಯ ಪ್ರಕಾರ,
ಆರೋಪಿಗಳಾದ ರಾಜೀವ್ ಮತ್ತು ವೆಂಕಟೇಶ್ ಅವರು ಕರ್ನಾಟಕದ ಕೊಲ್ಲೂರಿನಲ್ಲಿ ಕ್ರೀಡಾ ಸಂಬಂಧಿತ ಅಕಾಡೆಮಿ ತೆರೆಯುವುದಾಗಿ ಹೇಳಿಕೊಂಡಿದ್ದರು.
ಇದಕ್ಕೆ ಭಾರತದ ಮಾಜಿ ವೇಗದ ಬೌಲರ್ (Bowler) ಎಸ್. ಶ್ರೀಶಾಂತ್ ಕೂಡ ಪಾಲುದಾರ ಎಂದು ಹೇಳಿದ್ದರು. ಹಾಗೆಯೇ ಈ ಅಕಾಡೆಮಿಯಲ್ಲಿ ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವ ಭರವಸೆ
ನೀಡಿದ್ದರು. ಹೀಗಾಗಿ ನಾನು ಹಣವನ್ನು ಹೂಡಿಕೆ ಮಾಡಿದ್ದೆ. ಆದರೆ ಅಕಾಡೆಮಿ ಹೆಸರಲ್ಲಿ ನನ್ನ ಬಳಿ ಹಣ ಸುಲಿಗೆ ಮಾಡಿದ್ದಾರೆ ಎಂಬುದು ನನಗೆ ಆ ನಂತರ ತಿಳಿಯಿತು. ಇದರಲ್ಲಿ ಶ್ರೀಶಾಂತ್ ಕೂಡ
ಶಾಮೀಲಾಗಿದ್ದಾರೆ ಎಂದು ಸರೀಶ್ ಗೋಪಾಲನ್ (Sarish Gopalan) ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಶ್ರೀಶಾಂತ್ನನ್ನು ಆರೋಪಿ ಎಂದು ಘೋಷಿಸಿದ್ದಾರೆ.
ಇದನ್ನು ಓದಿ: ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್ಐಆರ್ ದಾಖಲು
- ಭವ್ಯಶ್ರೀ ಆರ್ ಜೆ