download app

FOLLOW US ON >

Tuesday, January 25, 2022
English English Kannada Kannada

ಡಿ.ಕೆ. ಶಿವಕುಮಾರ್‌ ಸೇರಿ 30 ಮಂದಿಯ ಮೇಲೆ FIR

ರಾಜ್ಯದಲ್ಲಿ ಒಮೈಕ್ರಾನ್ ಹಾಗೂ ಕೋವಿಡ್ ಪಾಸಿಟಿವ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಸರಕಾರವು ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿತ್ತು. ವಾರಾಂತ್ಯ ಕರ್ಫ್ಯೂ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಸಮೀಪದ ಸಂಗಮದಲ್ಲಿ ಚಾಲನೆ ನೀಡಲಾಗಿತ್ತು.

ಬೆಂಗಳೂರು  ಜ 10 :  ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿರುವ ಹಿನ್ನಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮೇತ 30 ಜನರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ  ದಾಖಲಾಗಿದೆ.

ರಾಜ್ಯದಲ್ಲಿ ಒಮೈಕ್ರಾನ್ ಹಾಗೂ ಕೋವಿಡ್ ಪಾಸಿಟಿವ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಸರಕಾರವು ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿತ್ತು. ವಾರಾಂತ್ಯ ಕರ್ಫ್ಯೂ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಸಮೀಪದ ಸಂಗಮದಲ್ಲಿ ಚಾಲನೆ ನೀಡಲಾಗಿತ್ತು. ಪಾದಯಾತ್ರೆ ವೇಳೆ ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಸಾತನೂರು ಪೊಲೀಸ್ ಠಾಣೆಯಲ್ಲಿ ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ 30 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ದೊಡ್ಡಾಲಹಳ್ಳಿಯಿಂದ ನಡಿಗೆ ಆರಂಭಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಸ್ವಗ್ರಾಮವೂ ಆದ ದೊಡ್ಡಾಲಹಳ್ಳಿಯಿಂದ ಕನಕಪುರ ಕಡೆಗೆ ಪಾದಯಾತ್ರಿಗರು ಹೆಜ್ಜೆ ಇಟ್ಟಿದ್ದು, ಕಾಂಗ್ರೆಸ್ ನ‌ ಅನೇಕ ನಾಯಕರು ಸಾಥ್ ನೀಡಿದ್ದಾರೆ. ಈ ದಿನ ಒಟ್ಟು 15 ಕಿ.ಮೀ. ಕ್ರಮಿಸಲಿದ್ದಾರೆ. ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp

Submit Your Article