Bengaluru: ಬೆಂಗಳೂರಿನ ವೀರಭದ್ರನಗರದಲ್ಲಿ (Veerabhadranagar) ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚೆಗಷ್ಟೇ ಸಂಭವಿಸಿದ್ದ ಬೆಂಕಿ ದುರಂತ ಪ್ರಕರಣಗಳು ಮಾಸುವ
ಮುನ್ನವೇ ಮತ್ತೊಂದು ಬೆಂಕಿ ದುರಂತ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್ಗಳು (Bus) ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿಶಾಮಕದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ವೆಲ್ಡಿಂಗ್ (Welding)
ಕೆಲಸ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಸುಮಾರು ೧೦ ಖಾಸಗಿ ಬಸ್ಗಳು ಸುಟ್ಟು ಹೋಗಿವೆ.
ಖಾಸಗಿ ಬಸ್ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ.
ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಈ ಪೈಕಿ ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದ್ದು, ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ
ಕಾರ್ಯದಲ್ಲಿ ತೊಡಗಿದ್ದಾರೆ.
ಇದನ್ನು ಓದಿ: ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಪ್ಯಾಲೆಸ್ತೀನ್ಗೆ ಬೆಂಬಲ ಸೂಚಿಸಿ ಮೌನ ಪ್ರತಿಭಟನೆ
- ಭವ್ಯಶ್ರೀ ಆರ್.ಜೆ