ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಗ್ಯಾರೇಜ್​ನಲ್ಲಿ 10ಕ್ಕೂ ಹೆಚ್ಚು ಖಾಸಗಿ ಬಸ್​ಗಳಿಗೆ ಬೆಂಕಿ

Bengaluru: ಬೆಂಗಳೂರಿನ ವೀರಭದ್ರನಗರದಲ್ಲಿ (Veerabhadranagar) ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚೆಗಷ್ಟೇ ಸಂಭವಿಸಿದ್ದ ಬೆಂಕಿ ದುರಂತ ಪ್ರಕರಣಗಳು ಮಾಸುವ

ಮುನ್ನವೇ ಮತ್ತೊಂದು ಬೆಂಕಿ ದುರಂತ ಸಂಭವಿಸಿದೆ.

ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್​ಗಳು (Bus) ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿಶಾಮಕದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ವೆಲ್ಡಿಂಗ್ (Welding)

ಕೆಲಸ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಸುಮಾರು ೧೦ ಖಾಸಗಿ ಬಸ್​ಗಳು ಸುಟ್ಟು ಹೋಗಿವೆ.

ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ.

ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಈ ಪೈಕಿ ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದ್ದು, ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ

ಕಾರ್ಯದಲ್ಲಿ ತೊಡಗಿದ್ದಾರೆ.

ಇದನ್ನು ಓದಿ: ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿ ಮೌನ ಪ್ರತಿಭಟನೆ

Exit mobile version