- ಒಡಿಶಾದ ಎಸ್‌ಸಿಬಿ ಮೆಡಿಕಲ್ ಕಾಲೇಜಿನಲ್ಲಿ (Fire accident in Cuttack Medical College ICU) ಅಗ್ನಿ ದುರಂತ
- ಐಸಿಯುನಲ್ಲಿ ಹೊತ್ತಿ ಉರಿದ ಬೆಂಕಿ: ವೆಂಟಿಲೇಟರ್‌ನಲ್ಲಿದ್ದ ರೋಗಿಗಳು ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ
- ಕನಿಷ್ಠ 10 ಮಂದಿ ಸಾವು, ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
Odissa: ಒಡಿಶಾದ ಕಟಕ್ ನಗರದಲ್ಲಿರುವ ಪ್ರಮುಖ ಎಸ್‌ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಸೇರಿದ (Fire accident in Cuttack Medical College ICU) ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ.
ಬೆಳಗಿನ ಜಾವ ಸುಮಾರು 2.30 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದ್ದು, ಐಸಿಯುನಲ್ಲಿದ್ದ ಹಲವಾರು ರೋಗಿಗಳು ಹೊಗೆಯಿಂದ ಉಸಿರುಗಟ್ಟಿಕೊಂಡು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ತುರ್ತು ಕ್ರಮ ಕೈಗೊಂಡು (Fire accident in Cuttack Medical College ICU) ಬೆಂಕಿಯನ್ನು
ನಂದಿಸಲು ಪ್ರಯತ್ನಿಸಿದರೂ, ಕೆಲ ರೋಗಿಗಳ ಪ್ರಾಣ ಉಳಿಸಲಾಗಲಿಲ್ಲ. ಈ ದುರ್ಘಟನೆ ರಾಜ್ಯದಾದ್ಯಂತ ಆತಂಕ ಮತ್ತು ದುಃಖದ ವಾತಾವರಣವನ್ನು ಸೃಷ್ಟಿಸಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೊದಲು ಐಸಿಯು ವಾರ್ಡ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಕವಾಗಿ ಹರಡಿತು. ಆ ಸಮಯದಲ್ಲಿ ಐಸಿಯುನಲ್ಲಿ ವೆಂಟಿಲೇಟರ್ (Ventilator) ಸಹಾಯದಲ್ಲಿದ್ದ ಹಲವಾರು ಗಂಭೀರ ರೋಗಿಗಳು ಇದ್ದರು.
ಬೆಂಕಿ ಕಾಣಿಸಿಕೊಂಡ ನಂತರ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಆಸ್ಪತ್ರೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾದರು.
ಆದರೂ ಹೊಗೆ ಮತ್ತು ಬೆಂಕಿಯ ಪರಿಣಾಮವಾಗಿ ಕೆಲವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.
ಈ ನಡುವೆ ಕನಿಷ್ಠ 11 ಮಂದಿ ಆಸ್ಪತ್ರೆ ಸಿಬ್ಬಂದಿಗೂ ಸುಟ್ಟ ಗಾಯಗಳಾಗಿದ್ದು, ಅವರಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದೆ. ಇನ್ನೂ ಕೆಲವು ರೋಗಿಗಳ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಆದರೆ ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಘಟನೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಗ್ನಿಶಾಮಕ ದಳದ ಹಲವಾರು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು.
ಬೆಂಕಿ ಸಂಪೂರ್ಣ ನಂದಿಸಿದ ಬಳಿಕ ರೋಗಿಗಳನ್ನು ಆಸ್ಪತ್ರೆಯ ಇತರ ವಾರ್ಡ್‌ಗಳ ಐಸಿಯುಗಳಿಗೆ ಸ್ಥಳಾಂತರಿಸಲಾಯಿತು.
ಈ ಘಟನೆ ಆಸ್ಪತ್ರೆಯ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.
ಘಟನೆಯ ಮಾಹಿತಿ ತಿಳಿದುಕೊಂಡ ತಕ್ಷಣ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ (Mohan Charan Majhi) ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಆರೋಗ್ಯ ಕಾರ್ಯದರ್ಶಿ, ಕಟಕ್ ಜಿಲ್ಲಾಧಿಕಾರಿ ಹಾಗೂ ಕಟಕ್ ಡಿಸಿಪಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸ್ಥಿತಿ ಹಾಗೂ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಮುಖ್ಯಮಂತ್ರಿ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.
ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದರು.
ಜೊತೆಗೆ ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ತನಿಖೆಯ ವರದಿ ಆಧಾರವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.
ಈ ದುರ್ಘಟನೆ ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಮಹತ್ವವನ್ನು ಮತ್ತೊಮ್ಮೆ ನೆನಪಿಸಿಕೊಟ್ಟಿದ್ದು, ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನು ಓದಿ : https://vijayatimes.com/announcement-of-by-election-date/