Uttar Pradesh: ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ (Jhansi hospital) ನಿನ್ನೆ ರಾತ್ರಿ ಅಗ್ನಿ ಅವಘಡ (Fire accident) ಸಂಭವಿಸಿದ್ದು, 10 ನವಜಾತ ಶಿಶುಗಳು ಸಾ*ನ್ನಪ್ಪಿದ್ದಾರೆ. 16 ಮಕ್ಕಳು (16 children) ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ (Maharani Lakshmi Bai) ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (NICU) ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.ಆಕ್ಸಿಜನ್ ಕಾನ್ಸೆಂಟ್ರೇಟರ್ ಒಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತುಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡ ತೊಡಿಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ (Hospital staff) ಕೂಡ ಆಘಾತಗೊಂಡಿದ್ದು, ವೈದ್ಯರು ಮತ್ತು ಇತರೆ ಸಿಬ್ಬಂದಿ ವಾರ್ಡ್‌ನ ಕಿಟಕಿ ಗಾಜುಗಳನ್ನು ಒಡೆದು ಅವುಗಳ ಮೂಲಕ ರೋಗಿಗಳನ್ನು ಹೊರಕ್ಕೆ ಕಳುಹಿಸಿದ್ದಾರೆ.

ಬೆಂಕಿ ತಗುಲಿದ ತಕ್ಷಣ ಆಸ್ಪತ್ರೆ ಸಿಬ್ಬಂದಿಗಳು ಸಾಧ್ಯವಾದಷ್ಟು ಮಕ್ಕಳನ್ನು ಕಾಪಾಡಿದ್ದಾರೆ . NICUನಲ್ಲಿ ಒಟ್ಟು 54 ಮಕ್ಕಳು ದಾಖಲಾಗಿದ್ದರು. ಈ ಬೆಂಕಿ ಅನಾಹುತದಲ್ಲಿ 10 ಮಕ್ಕಳು ಸಾ*ನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ 7 ಮಕ್ಕಳನ್ನು ಪತ್ತೆ ಮಾಡಲಾಗಿದೆ. ಉಳಿದ ಮೂರು ಮಕ್ಕಳು ಯಾರದ್ದೂ ಎಂದು ಇನ್ನೂ ಪತ್ತೆಯಾಗಿಲ್ಲ. ಈ ಕಾರಣಕ್ಕೆ ಮಕ್ಕಳ ಡಿಎನ್‌ಎ ಪರೀಕ್ಷೆ (DNA testing) ನಡೆಸಲು ಸೂಚಿಸಲಾಗಿದೆ.ಈ ನಡುವೆ ದುರ್ಘಟನೆ ಸಂಬಂಧ ಉತ್ತರಪ್ರದೇಶ ಸರ್ಕಾರ (Uttar Pradesh) ತನಿಖೆಗೆ ಆದೇಶಿಸಿದ್ದು, ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.
ಸ್ಥಳಕ್ಕೆ ಆರು ಅಗ್ನಿಶಾಮಕ (Fire Engine) ವಾಹನಗಳ ಜತೆಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಆಸ್ಪತ್ರೆಯ ಹೊರಗೆ ಮೃತಪಟ್ಟ ಮಕ್ಕಳ ಪೋಷಕರ (Parents of children) ಆಕ್ರಂದನ ಮುಗಿಲು ಮುಟ್ಟಿದೆ.ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು, ಘಟನೆ ಬಗ್ಗೆ ಮಾಹಿತಿ ಪಡೆದು ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ (Brajesh Pathak) ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಝಾನ್ಸಿಗೆ ಕಳುಹಿಸಲಾಗಿದೆ. ಇದರೊಂದಿಗೆ ಝಾನ್ಸಿ ಕಮಿಷನರ್ ಮತ್ತು ಡಿಐಜಿಗೆ (Commissioner and DIG) ಅಪಘಾತದ ತನಿಖೆಗೆ ಆದೇಶಿಸಲಾಗಿದೆ. ಎಲ್ಲ ಮಕ್ಕಳು ಕೂಡಲೇ ಗುಣಮುಖರಾಗಲಿ ಎಂದು ದೇವರ ಬಳಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ.