Visit Channel

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಬ್ಬರು ಸಾವು

maxresdefault

ಮುಂಬೈ, ಮಾ.26: ಇಲ್ಲಿನ ಕೋವಿಡ್ ಆಸ್ಪತ್ರೆಯೊಂದರಲ್ಲಿ ನಿನ್ನೆ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಮುಂಬೈನ ಭಾಂಡುಪ್​ನಲ್ಲಿರುವ ಡ್ರೀಮ್ಸ್ ಮಾಲ್​ನಲ್ಲಿ ಸ್ಥಾಪಿಸಲಾಗಿದ್ದ ಸನ್​ರೈಸ್ ಕೋವಿಡ್ ಹಾಸ್ಪಿಟಲ್​​ನಲ್ಲಿ ರಾತ್ರಿ 12:30ರ ವೇಳೆಯಲ್ಲಿ ಈ ಅವಘಡ ನಡೆದಿದೆ. ಈ ವೇಳೆ ಆಸ್ಪತ್ರೆಯಲ್ಲಿ 70ಕ್ಕೂ ಹೆಚ್ಚು ರೋಗಿಗಳು ಇದ್ದರೆನ್ನಲಾಗಿದೆ. ಬೆಂಕಿ ದುರಂತವಾದ ಬಳಿಕ ಬಹುತೇಕ ರೋಗಿಗಳನ್ನ ಕೂಡಲೇ ಸ್ಥಳಾಂತರ ಮಾಡಲಾಗಿದೆ. ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.

ಭಾಂಡುಪ್​ನಲ್ಲಿರುವ ಡ್ರೀಮ್ಸ್ ಮಾಲ್​ನ ಮೊದಲ ಮಹಡಿಯಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿತು. ಸುಮಾರು 22 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕೆಲಸ ನಡೆದಿದೆ.

ಮಾಲ್​ನಲ್ಲಿ ಕೋವಿಡ್ ಆಸ್ಪತ್ರೆ ಸ್ಥಾಪಿಸಿದ್ದಕ್ಕೆ ಬಹಳಷ್ಟು ಆಕ್ಷೇಪಗಳು ವ್ಯಕ್ತವಾಗಿದೆ. ಈ ವಿಷಯವಾಗಿ ಮುಂಬೈ ಮೇಯರ್ ಕೂಡ ಅಸಮಾಧಾನಗೊಂಡಿದ್ದಾರೆ. ಮಾಲ್​ನಲ್ಲಿ ಆಸ್ಪತ್ರೆ ಮಾಡಿದ್ದನ್ನು ತಾನು ಇದೇ ಮೊದಲು ನೋಡಿದ್ದಾಗಿ ಅವರು ಆಕ್ರೋಶ ಹೊರಹಾಕಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ಧಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.