ನಾಗ್ಪುರದ ಕೊವಿಡ್‌ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ಮೂವರು ಸಾವು, ಹಲವು ರೋಗಿಗಳಿಗೆ ಗಾಯ

ನಾಗಪುರ್, ಏ. 10: ಮಹಾರಾಷ್ಟ್ರದ ನಾಗಪುರ್ ಕೋವಿಡ್ ಆಸ್ಪತ್ರೆಯೊಂದರಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೆ. ಹಲವರು ಮಂದಿ ಗಾಯಗೊಂಡಿರುವುದು ತಿಳಿದುಬಂದಿದೆ. ನಾಗಪುರದ ವಾಡಿ ಪ್ರದೇಶದ ಅಮರಾವತಿ ರಸ್ತೆಯಲ್ಲಿರುವ ವೆಲ್ ಟ್ರೀಟ್ ಎಂಬ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ರಾತ್ರಿ 8:10ಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಕಾಣಿಸಿಕೊಂಡ ಕೂಡಲೇ ಸುಮಾರು ೨೭ ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ (ಐಸಿಯು) ಏರ್ ಕಂಡೀಷನರ್ (ಏಸಿ) ಬೆಂಕಿ ಹೊತ್ತಲು ಕಾರಣವೆಂದು ನಂಬಲಾಗಿದೆ. ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರಂತವಾಗಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ನಡೆದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ.

Exit mobile version