ದೆಹಲಿಯ ಶೂ ಕಾರ್ಖಾನೆಯಲ್ಲಿ ಬೆಂಕಿ ಅವಗಢ: 6 ಮಂದಿ ಕಾರ್ಮಿಕರು ನಾಪತ್ತೆ

ನವದೆಹಲಿ,ಜೂ.21: ದೆಹಲಿಯ ಪೀರಾಗಡಿ ಉದ್ಯೋಗ್ ನಗರದಲ್ಲಿರುವ ಶೂ ಕಾರ್ಖಾನೆಯಲ್ಲಿ ಸೋಮವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಒಟ್ಟು 31 ಅಗ್ನಿಶಾಮಕ ಟೆಂಡರ್‌ಗಳು ಮತ್ತು 50 ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳನ್ನು ಕರೆದಿರುವುದಾಗಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲವಾದರೂ, ತಮ್ಮ ಆರು ಉದ್ಯೋಗಿಗಳು ಕಾಣೆಯಾಗಿದ್ದಾರೆ. ಅವರು ತಮ್ಮ ಮೊಬೈಲ್ ಫೋನ್‌ಗಳಿಗೆ ಕರೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಕಾರ್ಖಾನೆಯ ಮಾಲೀಕರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಹೇಳಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ.

Exit mobile version