ಪ್ರಥಮ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ!

exams

ಕೊರೊನಾ ನಡುವೆಯೂ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ 2:30 ರಿಂದ 5:45 ಅವಧಿಯ ವೇಳಾಪಟ್ಟಿಯಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ನಿರ್ದೇಶಕರು ಹೇಳಿದ್ದಾರೆ.


ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20ರ ಒಳಗೆ ಮೌಲ್ಯಮಾಪನವನ್ನು ಮಾಡಲಾಗುತ್ತದೆ. ಏಪ್ರಿಲ್ 30ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು. ಪ್ರಥಮ ಪಿಯುಸಿ ವಾರ್ಷಿಕ ಹಾಗೂ ಪೂರಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸುವಂತೆ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ.

]’

ಏಪ್ರಿಲ್ 30ರ ಫಲಿತಾಂಶದ ಬಳಿಕ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 25 ರಿಂದ ಜೂನ್ 6 ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿದೆ. ಈ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಾವತಿ ಮಾಡಲು ಮೇ 16 ಕೊನೆಯ ದಿನಾಂಕವಾಗಿದೆ. ಪೂರಕ ಪರೀಕ್ಷೆಯ ಫಲಿತಾಂಶಗಳು ಜೂನ್ 15ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Exit mobile version