ಬಿಗ್ ಬಾಸ್ ಸೀಸನ್ 8ರ‌ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್: ಜೂನ್​ 23ರಿಂದ ಸೆಕೆಂಡ್ ಇನ್ನಿಂಗ್ಸ್ ಸ್ಟಾರ್ಟ್

ಬೆಂಗಳೂರು,ಜೂ.21: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅರ್ಧಕ್ಕೆ ರದ್ದಾಗಿದ್ದ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8ರ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಕೊರೊನಾ ನಡುವೆಯೂ ಬಿಗ್​ ಬಾಸ್​ ಸೀಸನ್​ 8ರ ಸಂಚಿಕೆ ಯಾವುದೇ ಅಡೆತಡೆಗಳಿಲ್ಲದೆ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಡೆಸಲಾಗುತ್ತಿತ್ತು. ಆದರೆ ಕೊರೊನಾ ಎರಡನೇ ಅಲೆ ಆರಂಭವಾದ ಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿತ್ತು. ಹೀಗಾಗಿ ರಾಜ್ಯದಲ್ಲಿ ಕಠಿಣ ಲಾಕ್​ಡೌನ್​ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಶೂಟಿಂಗ್​ ಮಾಡಲು ನಿಷೇಧ ಹೇರಿದ ಪರಿಣಾಮ ಬಿಗ್ ಬಾಸ್ ಕಾರ್ಯಕ್ರಮ 72 ದಿನದಲ್ಲೇ ಅಂತ್ಯಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊ‌ನಾ ಸೋಂಕಿನ ಅಬ್ಬರ ಕ್ಷೀಣಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಪುನರಾರಂಭಕ್ಕೆ ಕಲರ್ಸ್​ ವಾಹಿನಿ ಮುಂದಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದ್ದು, ಬಿಗ್ಬಾಸ್ 2ನೇ ಇನ್ನಿಂಗ್ಸ್ ಆರಂಭಕ್ಕೆ ಜೂ. 23ಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಸಂಬಂಧ ಕಲರ್ಸ್ ವಾಹಿನಿ ಪ್ರೋಮೋ ಸಹ ರಿಲೀಸ್ ಮಾಡಿದೆ.

ಹೀಗಾಗಿ ಕೊರೊನಾ ಕಾರಣಕ್ಕೆ ಅರ್ಧಕ್ಕೆ ಆಟ ಮುಗಿಸಿ ಮನೆಗೆ ಹಿಂದಿರುಗಿದ್ದ ಎಲ್ಲಾ 12 ಮಂದಿ ಸ್ಪರ್ಧಿಗಳಾದ ನಿಧಿ ಸುಬ್ಬಯ್ಯ, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಚಕ್ರವರ್ತಿ ಚಂದ್ರಚೂಡ್​, ರಘು, ಶಮಂತ್​ ಗೌಡ, ವೈಷ್ಣವಿ ಗೌಡ, ಶುಭಾ ಪೂಂಜಾ, ಅರವಿಂದ್, ದಿವ್ಯಾ ಉರುಡುಗ ಹಾಗೂ ಪ್ರಶಾಂತ್​ ಸಂಬರಗಿ ಮತ್ತೆ ದೊಡ್ಮನೆ ಪ್ರವೇಶಿಸೋಕ್ಕೆ ಲಗೇಜ್ ಪ್ಯಾಕ್ ಮಾಡಿಕೊಂಡು ಸಜ್ಜಾಗಿದ್ದಾರೆ. 

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.