ಕೆಜಿಎಫ್-2 ಬಿಡುಗಡೆಗೆ ಮುಹೂರ್ತ ಫಿಕ್ಸ್: ಜು.16ಕ್ಕೆ ಬೆಳ್ಳಿತೆರೆಗೆ ರಾಕಿ ಬಾಯ್ ಎಂಟ್ರಿ

ಬೆಂಗಳೂರು, ಜ. 30: ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿಯನದ ಕೆಜಿಎಫ್-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಕೆಜಿಎಫ್-2 ಚಿತ್ರವನ್ನು ಜುಲೈ 16ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಕೆರಳಿಸಿರುವ ಪ್ಯಾನ್ ಇಂಡಿಯಾ ಚಿತ್ರವಾಗಿರುವ ಕೆಜಿಎಫ್-2 ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಬೆಳ್ಳಿತೆರೆಗೆ ಬರಲಿದೆ. ಇದರೊಂದಿಗೆ ರಾಕಿ ಬಾಯ್ ಬರುವಿಕೆಗಾಗಿ ಕಾಯುತ್ತಿರುವ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಿತ್ರ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಕೆಜಿಎಫ್ ಚಾಪ್ಟರ್ 2 ಚಿತ್ರ, ಜುಲೈ 16ರಲ್ಲಿ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ವಿಜಯ್ ಕಿರಂಗದೂರು ನಿರ್ಮಾಣದ ಕೆಜಿಎಫ್-2 ಚಿತ್ರಕ್ಕೆ ರವಿ ಬಸ್ರೂರ್ ಅವರ ಸಂಗೀತವಿದೆ.

Exit mobile version