ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜೂ.14ರಿಂದ 25ರವರೆಗೆ ನಡೆಯಲಿರುವ ಎಕ್ಸಾಂ

ಬೆಂಗಳೂರು, ಜ. 28: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ, ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ.

ವಿಧಾನಸೌಧದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 14ರಿಂದ SSLC ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ತಾತ್ಕಾಲಿಕ ವೇಳಾಪಟ್ಟಿ:
ಜೂನ್ 14ರಂದು ಪ್ರಥಮ ಭಾಷೆ(ಕನ್ನಡ ಅಥವಾ ಇಂಗ್ಲಿಷ್),
ಜೂನ್ 16ರಂದು ಗಣಿತ ಅಥವಾ ಸಮಾಜಶಾಸ್ತ್ರ,
ಜೂನ್ 18ದ್ವಿತೀಯ ಭಾಷೆ(ಇಂಗ್ಲಿಷ್ ಅಥವಾ ಕನ್ನಡ),
ಜೂನ್ 21ರಂದು ವಿಜ್ಞಾನ, ಜೂನ್ 23 ಹಿಂದಿ(ತೃತೀಯ ಭಾಷೆ),
ಜೂನ್ 25 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ಪರೀಕ್ಷಾ ಅವಧಿ 3 ಗಂಟೆ 15 ನಿಮಿಷಗಳು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Exit mobile version