ಉಡುಪಿ ಮತ್ತು ಉತ್ತರ ಕನ್ನಡ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಹಠಾತ್ ಪ್ರವಾಹದ ಮುನ್ಸೂಚನೆ

Karnataka: ವರುಣನ ಅಬ್ಬರವು ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ (Flash flood forecast Udupi) ಒಳನಾಡಿನಾದ್ಯಂತ ವ್ಯಾಪಿಸುತ್ತಲೇ ಇದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಈಗಾಗಲೇ

ನಾಲ್ವರು ಸಾವನ್ನಪ್ಪಿದ್ದಾರೆ. ಈ ಮಧ್ಯೆ, ರಾಜ್ಯದ ಉಡುಪಿ (Udupi) ಮತ್ತು ಉತ್ತರ ಕನ್ನಡ (Uthara Kannada) ಭಾಗದಲ್ಲಿ ಹಠಾತ್ ಪ್ರವಾಹದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹೀಗಾಗಿ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.ಈ ನಿಟ್ಟಿನಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದಿಢೀರ್ ಪ್ರವಾಹ ಉಂಟಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಟ್ವೀಟ್ (Tweet) ಮಾಡಿದ್ದಾರೆ.

ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿಗಳಿಗೆ ರಾಜ್ಯ ಸರ್ಕಾರ (Government) ಸಂಪೂರ್ಣ ಸನ್ನದ್ಧವಾಗಿದೆ. ಭಾರೀ ಮಳೆ ಮತ್ತು ಪ್ರವಾಹದ ನಿರೀಕ್ಷೆಯ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ

ರಜೆ ಘೋಷಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಾಲಕರು ಮತ್ತು ವಿದ್ಯಾರ್ಥಿಗಳನ್ನು ಮನವಿ (Flash flood forecast Udupi) ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಹಣ ಕೇಳುವ ಸೈಬರ್ ಸೆಂಟರ್‌ಗಳ ಪರವಾನಗಿ ರದ್ದು: ಸರ್ಕಾರದ ಎಚ್ಚರಿಕೆ

ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು, ಈ ಬಗ್ಗೆ ಉಡುಪಿ ಜಿಲ್ಲಾಡಳಿತ ಎಚ್ಚರದಿಂದಿರಲು

ಸೂಚನೆ ನೀಡಿದ್ದಾರೆ. ಇದರ ವಿರುದ್ಧ ಎಚ್ಚೆತ್ತುಕೊಳ್ಳುವಂತೆ ಕರ್ನಾಟಕ ಸರಕಾರದಿಂದ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಉಡುಪಿಯ ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (Flash Flood) ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿರುವುದರಿಂದ

ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಸಚಿವರು ಸಂದೇಶ ರವಾನಿಸಿದ್ದಾರೆ. ಉತ್ತರ ಕನ್ನಡ, ಉಡುಪಿ, ಉತ್ತರ ಹಾಗೂ ದಕ್ಷಿಣ ಗೋವಾ(South Goa), ಮಹಾರಾಷ್ಟ್ರದ(Maharashtra) ಸಿಂಧುದುರ್ಗ,

ರತ್ನಗಿರಿ, ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾಹ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಸಾಲ ಮರುಪಾವತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಠಿಣ ಕ್ರಮ ಬೇಡ, ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ : ನಿರ್ಮಲ ಸೀತಾರಾಮನ್‌

ಸಾಧ್ಯವಾದಷ್ಟು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಪ್ರದೇಶಗಳಿಗೆ ಸಾರ್ವಜನಿಕರೂ ತೆರಳದಂತೆ ಎಚ್ಚರಿಕೆ ನೀಡಬೇಕು. ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲ ಕ್ರಮಗಳನ್ನು

ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ, ಗುಡ್ಡ ಕುಸಿಯಬಹುದು. ಆದ್ದರಿಂದ, ಗುಡ್ಡದ ಮೇಲೆ ವಾಸಿಸುವ ಪ್ರವಾಸಿಗರು ಮತ್ತು ಗ್ರಾಮಸ್ಥರು ಅಗತ್ಯ ಮುನ್ನೆಚ್ಚರಿಕೆಗಳನ್ನು

ತೆಗೆದುಕೊಳ್ಳಬೇಕು. ಜಲಪಾತ ವೀಕ್ಷಣೆ ಅಥವಾ ಚಾರಣ ಮಾಡಬೇಡಿ. ಜಿಲ್ಲಾಡಳಿತ ಪರಿಸ್ಥಿತಿಯ ಮೇಲೆ ಸಂಪೂರ್ಣ ನಿಗಾ ಇಡಬೇಕು ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಸತತ ಮೂರನೇ ದಿನವೂ ರಜೆ ಮುಂದುವರಿದಿದೆ.

ದಕ್ಷಿಣ ಕನ್ನಡ (Dakshina Kannada) ಭಾಗದಲ್ಲಿ ಪದವಿ ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ರಜೆಯೂ ಮುಂದುವರಿದಿದೆ. ವಿಜಯನಗರ (Vijayanagar) ಜಿಲ್ಲೆಯ ಪುಸುಲಹಡಗಲಿ, ಕೂಡ್ಲಿಗಿ, ಹರಪನಹಳ್ಳಿ ಮತ್ತು

ಕೊಟ್ಟೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಭಾರಿ ಮಳೆಗೆ ಒಂದೇ ದಿನ ನಾಲ್ವರು ಬಲಿಯಾಗಿದ್ದಾರೆ

ಒಂದೇ ದಿನ ರಾಜ್ಯದ ವಿವಿಧೆಡೆ ಮಳೆಯ ಅವಘಡಗಳಿಂದ ನಾಲ್ವರು ಸಾವನ್ನಪ್ಪಿದ್ದಾರೆ. ದಾವಣಗೆರೆ(Davanagere) ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು 1 ವರ್ಷದ ಬಾಲಕಿ

ಸಾವನ್ನಪ್ಪಿದ್ದಾಳೆ. ವಿಜಯಪುರ ಜಿಲ್ಲೆಯ ಕಣ್ಣೂರು(Kannur) ಗ್ರಾಮದಲ್ಲಿ ಮಳೆಯ ರಭಸಕ್ಕೆ ಸೀಲಿಂಗ್ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಇದೇ ವೇಳೆ ಮನೆ ಕುಸಿದು ಗಾಯಗೊಂಡಿದ್ದ ಹಾವೇರಿ

(Haveri) ತಾಲೂಕಿನ ಮಾಳಪುರ ಗ್ರಾಮದಲ್ಲಿ ಮೂರು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಬೀದರ್‌ (Beedar) ಜಿಲ್ಲೆಯ ಬಸವಕಲ್ಯಾಣ

ತಾಲೂಕಿನಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಬುಧವಾರವೂ ಸಹ ರಜೆ

ಈ ಮಧ್ಯೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಜು.26ರಂದು ಬುಧವಾರ ಕೂಡ ರಜೆ ಮುಂದುವರಿಸಲಾಗಿದೆ. ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ, ಮೂಡಲಗಿ,

ನಿಪ್ಪಾಣಿ, , ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ಪ್ರೌಢಶಾಲೆಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ಖಾನಾಪುರ(Khanapura) ತಾಲೂಕಿನಲ್ಲಿ ಮಾತ್ರ ರಜೆ ಘೋಷಿಸಲಾಗಿದೆ.

ನಡುಗಡ್ಡೆಗಳಾದ ಗ್ರಾಮಗಳು
ಬಹುತೇಕ ನದಿಗಳು ಈಗಾಗಲೇ ತುಂಬಿ ಹರಿಯುತ್ತಿದ್ದು, ಹಲವು ಗ್ರಾಮಗಳು ಈ ನಡುವೆ ನಡುಗಡ್ಡೆಗಳಾಗಿವೆ. ರಸ್ತೆ-ಸೇತುವೆಗಳು ಕೊಚ್ಚಿಹೋದ ಪರಿಣಾಮವಾಗಿ ಸಂಪರ್ಕ ಕಡಿತಗೊಂಡಿದೆ. ನೂರಾರು ಗ್ರಾಮಗಳು

ವಿದ್ಯುತ್‌ ಸಂಪರ್ಕ ಕಡಿತಗೊಂಡು ಕತ್ತಲೆಯಲ್ಲಿ ಮುಳುಗಿವೆ. ನೂರಾರು ಎಕರೆಲಯ ಹೊಲ-ಗದ್ದೆಗಳಲ್ಲಿದ್ದ ಬೆಳೆ ನೀರುಪಾಲಾಗದೆ.

ರಶ್ಮಿತಾ ಅನೀಶ್

Exit mobile version