Visit Channel

ಜರ್ಮನಿಯಲ್ಲಿ ಪ್ರವಾಹ: ಮೃತರ ಸಂಖ್ಯೆ 81ಕ್ಕೆ ಏರಿಕೆ

Germany

ಜರ್ಮನಿ, ಜು. 16: ಜರ್ಮನಿಯಾದ್ಯಂತ ಶುಕ್ರವಾರವೂ ಭಾರಿ ಮಳೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, 81 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.

ಪ್ರವಾಹದಿಂದಾಗಿ ಪಶ್ಚಿಮ ಜರ್ಮನಿಯ ರಹಿನೆಲ್ಯಾಂಡ್-ಪಾಲಟಿನೇಟ್ ಪ್ರದೇಶದಲ್ಲೇ 50 ಮಂದಿ ಸಾವನ್ನಪ್ಪಿದ್ದಾರೆ. ಬೆಲ್ಜಿಯಂನಲ್ಲಿ ಸಹ ಪ್ರವಾಹ ಬಂದಿದ್ದು, 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೆದರ್ಲೆಂಡ್‌ ಮತ್ತು ಲಕ್ಷಂಬರ್ಗ್‌ಗಳಲ್ಲೂ ಪ್ರವಾಹದಿಂದ ಅಪಾರ ಹಾನಿಯಾಗಿದೆ.

’ಮುಂದಿನ ದಿನಗಳಲ್ಲಿ ನಾವು ಇನ್ನೂ ಹೆಚ್ಚಿನ ಪ್ರಮಾಣದ ವಿಪತ್ತು ಸಂಭವಿಸುವ ಸಾಧ್ಯತೆಯಿದ್ದು, ಈ ಬಗ್ಗೆ ನನಗೆ ಆತಂಕವಾಗುತ್ತಿದೆ’ ಎಂದು ಜರ್ಮನಿಯ ಚಾನ್ಸೆಲರ್‌ ಏಂಜೆಲಾ ಮಾರ್ಕೆಲ್‌ ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಭೇಟಿಗಾಗಿ ಅವರು ವಾಷಿಂಗ್ಟನ್‌ಗೆ ಬಂದಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.