ವಿಮಾನದಲ್ಲಿ ಪೈಲಟ್ ನಿಂದ ಸಹ (flydubai flight passengers saved) ಪೈಲಟ್ ಗೆ ಚಾಕು ಇರಿದು ವಿಮಾನ ಪತನಗೊಳಿಸಲು ಯತ್ನ
ದುಬೈನಿಂದ ಇಸ್ರೇಲ್‌ಗೆ ಹೊರಟಿದ್ದ ಫ್ಲೈ ವಿಮಾನ : ಇಬ್ಬರು ಪೈಲೆಟ್ ಗಳು ಆಸ್ಪತ್ರೆಗೆ ದಾಖಲು
ಕಾಕ್‌ಪಿಟ್‌ನಲ್ಲಿ ಭೀಕರ ಸಂಘರ್ಷ; ಗಾಯಗೊಂಡಿದ್ದರೂ ವಿಮಾನದ ನಿಯಂತ್ರಣಕ್ಕೆ ನೆರವಾದ ಕ್ಯಾಪ್ಟನ್ ಸ್ಮಿತ್ ಮಚ್ಚರ್
ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ (Flydubai) ವಿಮಾನದಲ್ಲಿ ಸಂಭವಿಸಿದ ಆತಂಕಕಾರಿ ಘಟನೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ವಿಮಾನ ಹಾರಾಟದಲ್ಲಿದ್ದ ವೇಳೆ ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ತೀವ್ರ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಕೆಲವೇ ಕ್ಷಣಗಳಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ವರದಿಯಾಗಿದೆ.

ವಿಮಾನದಲ್ಲಿದ್ದ 27 ಮಕ್ಕಳು ಸೇರಿದಂತೆ ಒಟ್ಟು 174 ಪ್ರಯಾಣಿಕರ (flydubai flight passengers saved) ಸುರಕ್ಷತೆ ಅಪಾಯಕ್ಕೆ ಸಿಲುಕಿತ್ತು.
ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ಧೈರ್ಯ ಕಳೆದುಕೊಳ್ಳದೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ (Smith Machar) ಅವರ ಸಾಹಸಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮೋದಿ, ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲೂ ಇತರರ ಜೀವ ರಕ್ಷಿಸುವ ಸಂಕಲ್ಪದೊಂದಿಗೆ ಕ್ಯಾಪ್ಟನ್ ಮಚ್ಚರ್ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಅವರ ಧೈರ್ಯದಿಂದ ನೂರಾರು ಪ್ರಯಾಣಿಕರ ಜೀವ ಉಳಿದಿದ್ದು, ದೊಡ್ಡ ದುರಂತವೊಂದು ತಪ್ಪಿದೆ ಎಂದು ಮೋದಿ ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಲಭ್ಯವಾಗಿರುವ
ಮಾಹಿತಿಯ ಪ್ರಕಾರ, ವಿಮಾನ ಹಾರಾಟದಲ್ಲಿದ್ದಾಗ ಕಾಕ್‌ಪಿಟ್‌ನಲ್ಲಿ ಪೈಲಟ್ ಮತ್ತು ಸಹ ಪೈಲಟ್ (Pilot) ನಡುವೆ ತೀವ್ರ ಸಂಘರ್ಷ ನಡೆದಿದೆ ಎನ್ನಲಾಗಿದೆ.
ಇಸ್ರೇಲಿ ಅಧಿಕಾರಿಗಳು ಹಾಗೂ ಕೆಲವು ಪ್ರಯಾಣಿಕರ ಹೇಳಿಕೆಗಳ ಪ್ರಕಾರ, ಸಹ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮೇಲೆ ಚೂರಿಯಿಂದ ದಾಳಿ ನಡೆಸಿ ವಿಮಾನದ ನಿಯಂತ್ರಣವನ್ನು
ತನ್ನ ಕೈಗೆ ಪಡೆಯಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭದಲ್ಲಿ ಬೋಯಿಂಗ್ 737 ವಿಮಾನ ತೀವ್ರವಾಗಿ ಕೆಳಮುಖವಾಗಿ ಇಳಿಯಲು ಆರಂಭಿಸಿತು.
ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ವಿಮಾನ ಸುಮಾರು 14,000 ಅಡಿ ಎತ್ತರ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಪರಿಸ್ಥಿತಿ ಕೈಮೀರಬಹುದಾದ ಸಂದರ್ಭದಲ್ಲಿ ಗಾಯಗೊಂಡಿದ್ದ ಕ್ಯಾಪ್ಟನ್ ಮಚ್ಚರ್ ಕಾಕ್‌ಪಿಟ್ ಬಾಗಿಲು ತೆರೆದಿದ್ದಾರೆ.
ಇದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಒಳಗೆ ಪ್ರವೇಶಿಸಿ ಸಹ ಪೈಲಟ್‌ನನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅವಕಾಶ ದೊರೆಯಿತು. ವಿಮಾನದಲ್ಲೇ ಪ್ರಯಾಣಿಸುತ್ತಿದ್ದ
ಫ್ಲೈದುಬೈನ ಕರ್ತವ್ಯದಲ್ಲಿರದ ಇಬ್ಬರು ಪೈಲಟ್‌ಗಳು ಕೂಡ ವಿಮಾನದ ನಿಯಂತ್ರಣವನ್ನು ಮರಳಿ ಪಡೆಯಲು ನೆರವಾದರು ಎನ್ನಲಾಗಿದೆ.
ನಂತರ ವಿಮಾನವನ್ನು ಸೌದಿ ಅರೇಬಿಯಾದ ತಬೂಕ್‌ನಲ್ಲಿರುವ ಪ್ರಿನ್ಸ್ ಸುಲ್ತಾನ್ ಬಿನ್ ಅಬ್ದುಲಅಜೀಜ್ (Prince Sultan bin Abdulaziz) ವಿಮಾನ ನಿಲ್ದಾಣದತ್ತ ತಿರುಗಿಸಲಾಯಿತು.
ತುರ್ತು ಕ್ರಮಗಳ ಬಳಿಕ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದ್ದು, ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಯಾವುದೇ ಹೆಚ್ಚಿನ ಅಪಾಯವಿಲ್ಲದೆ ವಿಮಾನದಿಂದ ಹೊರಗೆ ಕರೆತರಲಾಯಿತು.
ಬಳಿಕ ಪ್ರಯಾಣಿಕರು ಮತ್ತೊಂದು ವಿಮಾನದ ಮೂಲಕ ತಮ್ಮ ಪ್ರಯಾಣವನ್ನು ಮುಂದುವರಿಸಿದರು. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ
ಬೆಂಜಮಿನ್ ನೆತನ್ಯಾಹು (Benjamin Netanyahu) ಕೂಡ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ.
ಭಾರತೀಯ ಪೈಲಟ್, ಪ್ರಯಾಣಿಕರು ಮತ್ತು ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ವೈಮಾನಿಕ ದುರಂತವೊಂದು ತಪ್ಪಿದೆ ಎಂದು ಅವರು ಹೇಳಿದ್ದಾರೆ.
ದಾಳಿಕೋರನನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾದ ಪ್ರಯಾಣಿಕರು ಮತ್ತು ಸಿಬ್ಬಂದಿಯ ಧೈರ್ಯವನ್ನೂ ಅವರು ಮೆಚ್ಚಿಕೊಂಡಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ಸಹ ಪೈಲಟ್ ಒಮನ್ ದೇಶದ ಪ್ರಜೆಯಾಗಿದ್ದು, ಆತನನ್ನು ಸೌದಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಆತ ಏಕೆ ಇಂತಹ ಕೃತ್ಯಕ್ಕೆ ಮುಂದಾದ ಎಂಬುದಕ್ಕೆ ಸಂಬಂಧಿಸಿದ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ತನಿಖೆ ಮುಂದುವರಿದಿದ್ದು, ಸಂಪೂರ್ಣ ವಾಸ್ತವಾಂಶಗಳು ಹೊರಬರುವವರೆಗೆ ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದು ಫ್ಲೈದುಬೈ ಮನವಿ ಮಾಡಿದೆ.
ಘಟನೆಯ ಹಿನ್ನೆಲೆಯಲ್ಲಿ ವಿಮಾನದಲ್ಲಿ ತುರ್ತು ಎಚ್ಚರಿಕೆಗಳು ಮೊಳಗಿದ್ದು, ಕೆಲಕಾಲ ವಿಮಾನ ಅಪಹರಣದ ಆತಂಕವೂ ಸೃಷ್ಟಿಯಾಗಿತ್ತು. ಆದರೆ ಪ್ರಯಾಣಿಕರು ಮತ್ತು ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ನಿಭಾಯಿಸಲು ಮುಂದಾದ ಪರಿಣಾಮ ವಿಮಾನವನ್ನು ಸುರಕ್ಷಿತವಾಗಿ ಇಳಿಸಲು ಸಾಧ್ಯವಾಯಿತು.
ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ವೃತ್ತಿಪರ ಅನುಭವವೂ ಇದೀಗ ಗಮನ ಸೆಳೆಯುತ್ತಿದೆ. ಅವರು 2022ರಲ್ಲಿ ಫ್ಲೈದುಬೈ ಸಂಸ್ಥೆಗೆ ಸೇರ್ಪಡೆಯಾಗಿದ್ದು, ಅದಕ್ಕೂ ಮೊದಲು ಭಾರತೀಯ ವಿಮಾನಯಾನ ಸಂಸ್ಥೆ ಸ್ಪೈಸ್‌ಜೆಟ್‌ನಲ್ಲಿ ಸುಮಾರು 11 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು ಎಂದು ವರದಿಯಾಗಿದೆ.
ಬೋಯಿಂಗ್ 737 ವಿಮಾನಗಳ ಹಾರಾಟದಲ್ಲಿ ಅವರಿಗೆ ಸಾಕಷ್ಟು ಅನುಭವವಿದ್ದು, ಸುಮಾರು 9,750 ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ ಎನ್ನಲಾಗಿದೆ.
ಈ ಘಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಹಲವು ಗಣ್ಯರು ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಕೂಡ ಘಟನೆಯ ಕುರಿತು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ ಬಳಿಕ ಭಾರತೀಯ ಪೈಲಟ್‌ನ ಸಾಹಸವನ್ನು ಮೆಚ್ಚಿಕೊಂಡಿದ್ದಾರೆ.
ಸದ್ಯ ಕ್ಯಾಪ್ಟನ್ ಮಚ್ಚರ್ ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದ್ದು, ಘಟನೆಗೆ ಕಾರಣವಾದ ನಿಖರ ಸಂಗತಿಗಳು ಮತ್ತು ಸಹ ಪೈಲಟ್‌ನ ಉದ್ದೇಶದ ಕುರಿತು ತನಿಖೆ ಮುಂದುವರಿದಿದೆ.
ಇದನ್ನು ಓದಿ : https://vijayatimes.com/sir-form-6-withdrawn/