Visit Channel

ಫುಟ್ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹಾದು ಹೋದ ಟ್ರಕ್ 15 ಜನ ಸಾವು

275632-1611030637

ಗುಜರಾತ್‌, ಜ. 19: ಸೂರತ್‌ನ ಕಿಮ್‌ ಚಾರ್‌ ರಸ್ತೆಯ ಫುಟ್‌ಪಾತ್‌ನಲ್ಲಿ ಮಲಗಿದ್ದ 18 ಜನ ವಲಸೆ ಕಾರ್ಮಿಕರ ಮೇಲೆ ಟ್ರಕ್‌ ಹರಿದ ಪರಿಣಾಮ 15 ಜನ ಮೃತಪಟ್ಟಿದ್ದಾರೆ.

ಈ ವಲಸೆ ಕಾರ್ಮಿಕರು ದಿನನಿತ್ಯ ರಾಜಸ್ಥಾನದಿಂದ ಬಾಣಸ್ವಾರ ಜಿಲ್ಲೆಗೆ ದಿನಗೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಅವರು ಸೂರತ್‌ನ ಕಿಮ್‌ ಚಾರ್‌ ರಸ್ತೆಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಕಬ್ಬು ಹೊತ್ತು ತಂದ ಟ್ರಾಕ್ಟರ್‌ಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಟ್ರಕ್‌ ತನ್ನ ನಿಯಂತ್ರಣ ತಪ್ಪಿ ಮಲಗಿದ್ದವರ ಮೇಲೆ ಹರಿದು ಹೋಗಿದೆ ಈ ಪರಿಣಾಮ 15 ಜನರು ಸಾವನಪ್ಪಿದ್ದಾರೆ.

ಡಿಕ್ಕಿಯಾದ ಸಂದರ್ಭದಲ್ಲಿ ಟ್ರಕ್‌ ಡ್ರೈವರ್‌ ತನ್ನ ಹಿಡಿತವನ್ನು ತಪ್ಪಿದ ಕಾರಣ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹಾದು ಹೋಗಿದೆ. 18 ಜನ ಮಲಗಿದ್ದವರಲ್ಲಿ 12 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 8 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ 3 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೇ ಟ್ರಕ್‌ ಡ್ರೈವರ್‌ನ್ನು ಅರೆಸ್ಟ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ.  

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.