ನವದೆಹಲಿ, ಜೂ. 11: ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳು ಸತತ ನಾಲ್ಕನೇ ದಿನವೂ ಒಂದು ಲಕ್ಷಕ್ಕಿಂತಲೂ ಕಡಿಮೆ ವರದಿಯಾಗಿದ್ದು, ಇಂದು 91,702 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೈನಂದಿನ ಸಕಾರಾತ್ಮಕ ಪ್ರಮಾಣವು ಶೇ 4.49ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,92,74,823ಕ್ಕೆ ಏರಿಕೆಯಾಗಿದ್ದು, ಕಳೆದ ೨೪ ಗಂಟೆಗಳ 3,403 ಜನರ ಸಾವಿನೊಂದಿಗೆ ಮೃತರ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 11,21,671 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 3.83 ರಷ್ಟಿದೆ. ಕೋವಿಡ್-19 ಚೇತರಿಕೆ ಪ್ರಮಾಣವು ಶೇ 94.93ರಷ್ಟಿದೆ.
ಜೂ. 10ರ ಹೊತ್ತಿಗೆ ದೇಶದಲ್ಲಿ 37,42,42,384 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಗುರುವಾರ ಒಂದೇ ದಿನ 20,44,131 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ತಿಳಿಸಿದೆ.