• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿಗಳ ಹುನ್ನಾರ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿಗಳ ಹುನ್ನಾರ: ಎಚ್‌.ಡಿ.ಕುಮಾರಸ್ವಾಮಿ ಕಿಡಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಜೂ. 07: ಕನ್ನಡ ಭಾಷೆಯನ್ನು ಅಪಮಾನಿಸಿ ಗೂಗಲ್‌ ಕ್ಷಮೆ ಕೋರಿದ ಬೆನ್ನಲ್ಲೇ ಕನ್ನಡದ ಬಾವುಟವನ್ನು ಬಿಕಿನಿಯಂತೆ ತೋರಿಸಿ ವಿವಾದ ಸೃಷ್ಟಿಸಿರುವ ಅಮೆಜಾನ್‌ ವಿರುದ್ಧ ಎಲ್ಲೆಡೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಚ್‌.ಡಿ.ಕುಮಾರಸ್ವಾಮಿ ಅವರು, ಕ್ಷಮೆ ಯಾಚಿಸುವಂತೆ ಅಮೆಜಾನ್‌ ಅನ್ನು ಒತ್ತಾಯಿಸಿದ್ದಾರೆ. ಸರಣಿ ಟ್ವೀಟ್‌ ಮಾಡಿರುವ ಎಚ್‌ಡಿಕೆ, ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ ಅಮೆಜಾನ್‌ಗೆ ಕನ್ನಡಿಗರು ಬಿಸಿಮುಟ್ಟಿಸಿದ್ದಾರೆ. ಅಮೆಜಾನ್‌ ತನ್ನ ತಪ್ಪು ಸರಿಪಡಿಸಿಕೊಂಡಿದೆ. ಕನ್ನಡವನ್ನು ಅವಮಾನಿಸಿದ ಗೂಗಲ್‌ಗೆ ಪಾಠ ಕಲಿಸಿದ್ದು, ಈಗ ಅಮೆಜಾನ್‌ಗೆ ಬುದ್ಧಿ ಕಲಿಸಿದ್ದರಲ್ಲಿ ಎದ್ದು ಕಾಣುವಂಥದ್ದು ಕನ್ನಡಿಗರ ‘ಅಭಿಮಾನ’. ಅದಕ್ಕಾಗಿ ಕನ್ನಡದ ಮನಸ್ಸುಗಳನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ. ಗೂಗಲ್‌ ನಂತರ ಈಗ ಅಮೆಜಾನ್‌ನ ಕೆನಡಾ ವಿಭಾಗ ನಿರ್ಲಕ್ಷ್ಯ ಮೆರೆದಿದೆ. ಈ ಸಂಸ್ಥೆಗಳು ಭಾಷೆ ಮತ್ತು ಭಾವನೆಗಳ ವಿಚಾರದಲ್ಲಿ ಯಾಕಿಂಥ ನಿರ್ಲಕ್ಷ್ಯವಹಿಸುತ್ತಿವೆ? ಈ ಬಗ್ಗೆ ಅಮೆಜಾನ್‌ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಾವುಟದ ಜೊತೆಗೇ, ಕರ್ನಾಟಕದ ರಾಜ ಲಾಂಛನವನ್ನೂ ಅಮೆಜಾನ್‌ ಅಮಾನಿಸಿದೆ. ಇದು ಸರ್ಕಾರಕ್ಕೆ ಮಾಡಲಾದ ಅಪಮಾನ. ಸರ್ಕಾರ ಸಂವಿಧಾನದ ಅಂಗ. ಹೀಗಾಗಿ ಅಮೆಜಾನ್‌ನಿಂದ ಬಹುದೊಡ್ಡ ಅಪಚಾರವಾಗಿದೆ. ಅಮೆಜಾನ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು. ಮುಂದೆ ಇಂಥ ಮುಜುಗರ ತಪ್ಪಿಸಲು ಇದು ಅಗತ್ಯ. ʻಕನ್ನಡ ಕೆಟ್ಟ ಭಾಷೆ‘ ಎಂಬ ವಿಚಾರ ಗೂಗಲ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈ ಘಟನೆಯೂ ಬಯಲಾಗಿರುವುದನ್ನು ಗಮನಿಸುತ್ತಿದ್ದರೆ, ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ. ಜನಸಮುದಾಯವೊಂದರ ಭಾವನೆಗಳ ಜೊತೆಗೆ ಆಟವಾಡುತ್ತಿರುವವರನ್ನು ಪತ್ತೆ ಹಚ್ಚುವ ಸಂದರ್ಭ ಈಗ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.

ಇಂಥ ಅಪಮಾನಗಳ ಮೂಲಕ ಕನ್ನಡಿಗರ ಸಹನೆ ಕೆಣಕುವ ಕೆಲಸ ಇಂಥ ಸಂಸ್ಥೆಗಳಿಂದ ಆಗುತ್ತಲೇ ಇವೆ. ಕನ್ನಡಿಗರ ಕೋಪದಿಂದ ಸಿಡಿಯುವ ಕಿಡಿಯಿಂದ ಅನಾಹುತಗಳು ಸಂಭವಿಸಿದರೆ, ಅದನ್ನು ತಾಳಿಕೊಳ್ಳುವ ಶಕ್ತಿ ಈ ಸಂಸ್ಥೆಗಳಿಗೆ ಉಳಿಯಲಾರದು. ಪರಿಸ್ಥಿತಿ ಅಲ್ಲಿಗೆ ಹೋಗುವ ಮೊದಲು ಅಮೆಜಾನ್‌ ಜಾಗತಿಕವಾಗಿ ಕ್ಷಮೆ ಕೋರಬೇಕು. ತಪ್ಪಿತಸ್ಥರನ್ನು ಹಿಡಿದುಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ @amazon ಗೆ ಕನ್ನಡಿಗರು ಬಿಸಿಮುಟ್ಟಿಸಿದ್ದಾರೆ. ಅಮೆಜಾನ್‌ ತನ್ನ ತಪ್ಪು ಸರಿಪಡಿಸಿಕೊಂಡಿದೆ. ಕನ್ನಡವನ್ನು ಅವಮಾನಿಸಿದ ಗೂಗಲ್‌ಗೆ ಪಾಠ ಕಲಿಸಿದ್ದು, ಈಗ ಅಮೆಜಾನ್‌ಗೆ ಬುದ್ಧಿ ಕಲಿಸಿದ್ದರಲ್ಲಿ ಎದ್ದು ಕಾಣುವಂಥದ್ದು ಕನ್ನಡಿಗರ ‘ಅಭಿಮಾನ’. ಅದಕ್ಕಾಗಿ ಕನ್ನಡದ ಮನಸ್ಸುಗಳನ್ನು ಅಭಿನಂದಿಸುತ್ತೇನೆ.
1/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 6, 2021

Related News

ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.