download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಐಬಿಪಿಎಸ್‌ ವತಿಯಿಂದ ಕನ್ನಡದಲ್ಲಿ ಬ್ಯಾಂಕಿಂಗ್‌ ನೇಮಕಾತಿ ಪರೀಕ್ಷೆ: ಮಾಜಿ ಸಿಎಂ ಕುಮಾರಸ್ವಾಮಿ ಮೆಚ್ಚುಗೆ

ಐಬಿಪಿಎಸ್ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ ಎಂದಿದ್ದಾರೆ.

ಬೆಂಗಳೂರು, ಜೂ. 11: ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್(ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳನ್ನು ಈ ಬಾರಿ ಕನ್ನಡದಲ್ಲಿ ನಡೆಸುತ್ತಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್(ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಅಭಿನಂದಿಸುತ್ತೇನೆ.

ಆದರೆ, ಐಬಿಪಿಎಸ್ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ ಎಂದಿದ್ದಾರೆ.

ಅಲ್ಲದೇ, 2014ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್ಗಳಲ್ಲಿ ಕನ್ನಡ ತಿಳಿಯದವರೇ ತುಂಬಿರುವುದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ.

ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು.

ಈ ಬಾರಿ ಐಬಿಪಿಎಸ್ ನಡೆಸುತ್ತಿರುವ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್ಗಳಿವೆ. ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ.

ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ ಎಂದಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article