ಬೆಂಗಳೂರು. ಜೂ. 07: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.
ʻನನ್ನ ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಾಡಿನ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆʼ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.