ಬೆಂಗಳೂರು, ಜೂ. 01: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ರಾತ್ರಿಯಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಯಿತು. ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.
ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ನಡೆಸಿದ ಡಾ. ರವಿಕುಮಾರ್, ಮಂಗಳವಾರ ಇಡೀ ದಿನ ವಿಶ್ರಾಂತಿ ಪಡೆಯಲು ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆಯಂತೆ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ.