ಹೊಸದಿಲ್ಲಿ, ಜು. 19: ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಸಿಧು ನಡುವಿನ ಜಟಾಪಟಿ ಮುಂದುವರಿದ ಬೆನ್ನಲ್ಲೇ ಆ ಆದೇಶ ಹೊರಡಿಸಲಾಗಿದೆ. ಸಿಧು ಅವರೊಂದಿಗೆ ನಾಲ್ವರನ್ನು ಪಿಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಸಹ ನೇಮಕ ಮಾಡಲಾಗಿದೆ.
ಅದರಂತೆ ಕುಲ್ಜಿತ್ ಸಿಂಗ್ ನಾಗ್ರಾ, ಪವನ್ ಗೋಯೆಲ್, ಸುಖ್ವಿಂದರ್ ಸಿಂಗ್ ಡ್ಯಾನಿ, ಮತ್ತು ಸಂಗತ್ ಸಿಂಗ್ ಗಿಲ್ಜಿಯಾನ್ ಅವರನ್ನು ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಈ ಆದೇಶ ತಕ್ಷಣವೇ ಜಾರಿಗೆ ಬರುವಂತೆ ಸೂಚಿಸಿದ್ದಾರೆ.