ಕೊರೊನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಏ. 07: ಕೊರೊನಾ ಸೋಂಕು ಕಾಣಿಸಿಕೊಂಡು ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಗುಣಮುಖರಾಗಿ ಡಿಸ್ಜಾರ್ಜ್ ಹೊಂದಿದರು.

ರಮೇಶ್ ಜಾರಕಿಹೊಳಿಗೆ ಅವರಿಗೆ ಏ. 1ರಂದು ಕೊರೋನಾ ಪಾಸಿಟಿವ್ ಕಾಣಿಸಿಕೊಂಡು ಅವರು ಹೋಂ ಐಸೋಲೇಷನ್ ನಲ್ಲಿ ಇದ್ದರು. ಆದರೆ, ಏ.4 ರಂದು ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾದರು. ಇದೀಗ ಅವರ ಆರೋಗ್ಯ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಸಹ ಅವರು ಕೆಲ ಕಾಲ ಮನೆಯಲ್ಲಿ ಹೋಂ ಐಸೋಲೇಷನ್ ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಅವರು ಕೆಲವು ದಿನಗಳ ಕಾಲ ಮನೆಯಲ್ಲಿ ಉಳಿಯಲಿದ್ದಾರೆ.

ರಮೇಶ್ ಜಾರಕಿಹೊಳಿ ಅವರಿಗೆ ನಿಜವಾಗಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆಯೇ? ಅವರು ನಾಟಕವಾಡುತ್ತಿದ್ದಾರೆಯೇ? ಅವರ ವರದಿಯನ್ನು ಬಹಿರಂಗ ಪಡಿಸಿ ಎಂಬ ಒತ್ತಾಯ ಕೇಳಿ ಬರುತಿತ್ತು. ಈ ನಡುವೆ ಮಂಗಳವಾರ ಎಸ್‌ಐಟಿ ಅಧಿಕಾರಿಗಳು ಗೋಕಾಕ್ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರಿಂದ ರಮೇಶ್ ಜಾರಕಿಹೊಳಿ ಅವರ ಆರೋಗ್ಯ ಸಂಬಂಧಿ ದಾಖಲೆ ಪಡೆದು ಪರಿಶೀಲನೆ ನಡೆಸಿದ್ದರು.

Exit mobile version