ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 10 ವರ್ಷಗಳ ಜೈಲು ಶಿಕ್ಷೆ ಪ್ರಕಟ

Islamabad : ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ (Former Prime Minister) ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(Tehreek-e-Insaf) (ಪಿಟಿಐ) ಸಂಸ್ಥಾಪಕ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ ಶಾ ಮಹಮೂದ್ ಖುರೇಷಿ (Mahmood Qureshi) ಅವರಿಗೆ ಪಾಕಿಸ್ತಾನದ ವಿಶೇಷ ನ್ಯಾಯಾಲಯವು ದೇಶದ ರಹಸ್ಯ ಮಾಹಿತಿ ಸೋರಿಕೆ ಮಾಡಿರುವ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ದೇಶದ ರಹಸ್ಯ ಮಾಹಿತಿ ಸೋರಿಕೆ ಮಾಡಿರುವ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರ ವಶದಲ್ಲಿದ್ದ ಪ್ರಮುಖ ದಾಖಲೆಯೊಂದು ಕಾಣೆಯಾಗಿದೆ ಎಂದು ವರದಿಯಾಗಿದೆ. ಕಳೆದ ವರ್ಷ ತನ್ನ ವಿರುದ್ಧದ ಅವಿಶ್ವಾಸ ನಿರ್ಣಯದ ಮೊದಲು ರಹಸ್ಯ ಮಾಹಿತಿ (Confidential information) ಸೋರಿಕೆ ಮಾಡಿರುವ ಪ್ರಕರಣದಲ್ಲಿ ತನ್ನನ್ನು ಸಿಲುಕಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದರು.

ಇನ್ನು ಈ ಪ್ರಕರಣದಲ್ಲಿ ಇಮ್ರಾನ್ ಖಾನ್ (Imran Khan) ಮತ್ತು ಖುರೇಷಿ (Qureshi) ವಿರುದ್ಧ ಹೇಳಿಕೆಗಳನ್ನು ನೀಡಲು ಹತ್ತು ಸಾಕ್ಷಿಗಳು ಬಂದಿದ್ದರು. ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (Federal Investigation Agency of Pakistan) (ಎಫ್ಐಎ) ಅವರನ್ನು ಕರೆತಂದಿದ್ದು, ಅಧಿಕೃತ ರಾಜತಾಂತ್ರಿಕ ಸಂವಹನದ (diplomatic communication) ವಿವರಗಳನ್ನು ಬಹಿರಂಗಪಡಿಸುವ ಮೂಲಕ ದೇಶದ ರಹಸ್ಯ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಖಾನ್ ಮತ್ತು ಖುರೇಷಿ ವಿರುದ್ಧ ಆಗಸ್ಟ್ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಡಿಸೆಂಬರ್ನಲ್ಲಿ ಪಾಕಿಸ್ತಾನದ ಸುಪ್ರೀಂಕೋರ್ಟ್ ಇಮ್ರಾನ್ ಖಾನ್ ಮತ್ತು ಖುರೇಷಿಗೆ ಬಂಧನದ ನಂತರ ಜಾಮೀನು ನೀಡಿತ್ತು. ನಂತರ ಏಪ್ರಿಲ್ 2022 ರಲ್ಲಿ ಅವಿಶ್ವಾಸ ಮತದ ಮೂಲಕ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ಪ್ರಧಾನ ಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು. ಇಸ್ಲಾಮಾಬಾದ್ ನ್ಯಾಯಾಲಯವು ತೋಶಖಾನಾ ಪ್ರಕರಣದಲ್ಲಿ ಮೂರು ವರ್ಷಗಳ ಜೈಲು (Jail) ಶಿಕ್ಷೆಯನ್ನು ವಿಧಿಸಿದ ನಂತರ ಅವರನ್ನು ಆಗಸ್ಟ್ 5, 2023 ರಂದು ಜೈಲಿಗೆ ಹಾಕಲಾಯಿತು. ಜೈಲು ಶಿಕ್ಷೆಯನ್ನು ಅನುಭವಿಸಲು ಅವರನ್ನು ಅಟಾಕ್ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು. ನಂತರ, ಅವರ ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ (Islamabad High Court) ಅಮಾನತುಗೊಳಿಸಿತು. ಆದರೆ ಕೆಲ ದಿನಗಳ ನಂತರ ಅವರನ್ನು ಮತ್ತೆ ರಹಸ್ಯ ಮಾಹಿತಿ ಸೋರಿಕೆ ಮಾಡಿರುವ ಪ್ರಕರಣದಲ್ಲಿ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಅಟಾಕ್ ಜೈಲಿನಲ್ಲಿ ಇರಿಸಲಾಗಿತ್ತು.

ಇಮ್ರಾನ್ ಖಾನ್ ಅವರಿಗೆ ಶಿಕ್ಷೆ ಘೋಷಣೆಯಾಗುತ್ತಿದ್ದಂತೆ ತೆಹ್ರೀಕ್-ಎ-ಇನ್ಸಾಫ್ (Tehreek-e-Insaf) (ಪಿಟಿಐ) ಪಕ್ಷದ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದು. ಪಾಕಿಸ್ತಾನದ ಅನೇಕ ಕಡೆಗಳಲ್ಲಿ ಭಾರೀ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ.

Exit mobile version