ಬೆಂಗಳೂರು, ಮಾ. 31: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹಾಗೂ ಅವರ ಪತ್ನಿ ಚನ್ನಮ್ಮ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್.ಡಿ.ದೇವೇಗೌಡ ಅವರು, ನನ್ನ ಪತ್ನಿ ಚೆನ್ನಮ್ಮ ಹಾಗೂ ತಮಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕುಟುಂಬದ ಇತೃ ಸದಸ್ಯರೊಂದಿಗೆ ತಾವಿಬ್ಬರೂ ಐಸೋಲೇಷನ್ನಲ್ಲಿದ್ದೇವೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಸಹ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ತಿಳಿಸಿರುವ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಆತಂಕ ಪಡೆದಂತೆ ಮನವಿ ಮಾಡಿದ್ದಾರೆ.
ಇನ್ನೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ. ಸುಧಾಕರ್ ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಎಂದು ಹೇಳಿದ್ದಾರೆ.