Uttar kannada : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ (Bhatkal Taluk) ಮುರ್ಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದಾರೆ.ಕೋಲಾರದ ಮುಳಬಾಗಿಲಿನಿಂದ (Kolar) ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ (Deceased student) ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ (Rs 5 lakh each.) . ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (Association of Karnataka Residential Educational Institutions) ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಮುರುಡೇಶ್ವರ ಬೀಚ್ನಲ್ಲಿ (Murudeshwar Beach) ಇಂದು ಸಂಜೆ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು (Seven female students) ಕೊಚ್ಚಿ ಕೊಂಡು ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಿ (Yashodha, vikshana, protect the scribe) ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇನ್ನುಳಿದಂತೆ ದೀಕ್ಷ, ಲಾವಣ್ಯ, ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.ಏತನ್ಮಧ್ಯೆ, ಮಕ್ಕಳ ಪೋಷಕರು ಹಾಗೂ ಶಾಸಕ ಸಮೃದ್ಧಿ ಮಂಜುನಾಥ್ (MLA Samriddhi Manjunath) ಬುಧವಾರ ಮುರುಡೇಶ್ವರ ತಲುಪಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಡಳಿತದ ನೆರವಿನಿಂದ ಉಳಿದ ಮೂರು ಜನ ವಿದ್ಯಾರ್ಥಿನಿಯರ ಶವಕ್ಕಾಗಿ ಹುಡುಕಾಟ ಸಾಗಿದೆ. ಪ್ರವಾಸಕ್ಕೆ ಹೋಗಿದ್ದ ಇತರ ಮಕ್ಕಳನ್ನು ಮರಳಿ ಊರಿಗೆ ಕಳಿಸಲು ಜಿಲ್ಲಾಡಳಿತ ಹಾಗೂ ಶಾಸಕ ಸಮೃದ್ದಿ ಮಂಜುನಾಥ್ ಸಿದ್ಧತೆ ಮಾಡುತ್ತಿದ್ದಾರೆ.
ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು (Principal Sasikala) ಅಮಾನತುಗೊಳಿಸಲಾಗಿದೆ. ಅಥಿತಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪ ಹಿನ್ನೆಲೆ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು (Kantharaju) ಅದೇಶ ಹೊರಡಿಸಿದ್ದಾರೆ.