ಹಾಸನ, ಫೆ. 13: ಕಾರೊಂದು ಆಯಿಲ್ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಬಕಾರಿ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಟೆಕ್ಕಿಗಳು ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರಿನ ಮಂಜುನಾಥ್, ಚೇತನ್, ಅಭಿಷೇಕ್ ಹಾಗೂ ವಿಕ್ರಂ ಎಂದು ಗುರುತಿಸಲಾಗಿದೆ.
ಮೃತ ನಾಲ್ವರು ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದರು. ಈ ವೇಳೆ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಈ ಸಂಬಂಧ ಚನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.