Visit Channel

ವಂಚನೆ ಪ್ರಕರಣ: ಸಚಿವ ಶ್ರೀರಾಮುಲು ಪಿಎ ಬಂಧನ ವಿಚಾರ: ಸ್ಪಷ್ಟನೆ ನೀಡಿದ ಬಿ.ವೈ ವಿಜಯೇಂದ್ರ; ಬಿಎಸ್ವೈಗೆ ಶುರುವಾಯ್ತು ಹೊಸ ತಲೆನೋವು

bd24dad5-8bed-4ec9-aafb-ead20decfcdf

ಬೆಂಗಳೂರು.ಜು.02: ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಿ.ವೈ‌. ವಿಜಯೇಂದ್ರ ನೀಡಿದ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ರಾಜಣ್ಣ ಅವರನ್ನ ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ನಡೆಯಬೇಕಿದೆ.

ಇನ್ನೂ ಪ್ರಕರಣದ ಕುರಿತು ಟ್ವೀಟ್ ಮಾಡಿರುವ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿ ಬಳಕೆಯಾಗುತ್ತಿದೆ ಎಂದಿದ್ದಾರೆ.

ಅಲ್ಲದೇ, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ ಎಂದಿದ್ದಾರೆ.

ಸರ್ಕಾರದ ವಿರುದ್ಧ ಮುನಿಸು
ಈ ನಡುವೆ ತಮ್ಮ ಆಪ್ತ ಸಹಾಯಕನ ವಿರುದ್ಧ ದೂರು ನೀಡುವ ಮುನ್ನ ಸೌಜನ್ಯಕ್ಕಾದರೂ ತಮ್ಮ ಬಳಿ ಸಣ್ಣ ಸುಳಿವನ್ನೂ ನೀಡದೆ ಇರುವುದಕ್ಕೆ ಪಕ್ಷದ ವಿರುದ್ಧವೇ ಸಚಿವ ಶ್ರೀರಾಮುಲು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ನಡವಳಿಕೆಗೆ ರಾಮುಲು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಿಎಸ್ವೈಗೆ ಮತ್ತೊಂದು ತಲೆನೋವು
ಕಳೆದ ಕೆಲವು ದಿನಗಳ ಹಿಂದೆ ಎದುರಾಗಿದ್ದ ನಾಯಕತ್ವ ಬದಲಾವಣೆ ಗೊಂದಲ ಇತ್ಯರ್ಥವಾದ ಬೆನ್ನಲ್ಲೇ ನಡೆದಿರುವ ಈ ಬೆಳವಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೊಸ ತಲೆನೋವು ತಂದೊಡ್ಡಿದೆ. ಸದ್ಯ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣ ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೊಸ ಸ್ವರೂಪ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

Latest News

BJP
ರಾಜಕೀಯ

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? : ಬಿಜೆಪಿ

ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ(Congress Party) ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ ಎಂದಿದೆ.

Fruit
ಮಾಹಿತಿ

ಬಿಪಿ, ಮದುಮೇಹ ಸೇರಿದಂತೆ ಅನೇಕ ಖಾಯಿಲೆಗಳಿಗೆ ರಾಮಬಾಣ ನೇರಳೆ ಹಣ್ಣು ; ಓದಿ ಈ ಉಪಯುಕ್ತ ಮಾಹಿತಿ

ಮಧುಮೇಹ, ಹೃದಯದ ಕಾಯಿಲೆ, ಸಂಧಿವಾತ, ಹೊಟ್ಟೆಯ ಖಾಯಿಲೆಗಳ ನಿಯಂತ್ರಣ ಮತ್ತು ನಿವಾರಣೆಗೂ ಇದು ರಾಮಬಾಣ ಎನ್ನುತ್ತದೆ ಆಯುರ್ವೇದ(Ayurveda).

Lal Singh Chadda
ಮನರಂಜನೆ

ಲಾಲ್ ಸಿಂಗ್ ಚಡ್ಡಾ ನಷ್ಟಕ್ಕೆ ವಿತರಕರಿಗೆ ಪರಿಹಾರ ಕೊಡಲು ಸಜ್ಜಾದ್ರಾ ನಟ ಅಮೀರ್ ಖಾನ್?

ಚಿತ್ರದ ವಿತರಕರಿಗೆ ಪರಿಹಾರದ ಮಾದರಿಯನ್ನು ರೂಪಿಸಲು ನಟ ಅಮೀರ್ ಖಾನ್ ಮಾತುಕತೆ ನಡೆಸುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.