ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ: ಕೇಜ್ರಿವಾಲ್‌

ಹೊಸದಿಲ್ಲಿ, ಮೇ. 14: ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ದಿಲ್ಲಿ ಸರ್ಕಾರದ ವತಿಯಿಂದ ಉಚಿತ ಶಿಕ್ಷಣ ನೀಡುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಘೊಷಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕೋವಿಡ್‌ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ನೋವು ನನಗೆ ಅರ್ಥವಾಗುತ್ತದೆ. ಅಂತಹ ಮಕ್ಕಳು ಅನಕ್ಷರಸ್ಥರಾಗಲು ನಾವು ಬಿಡುವುದಿಲ್ಲ. ಸರ್ಕಾರವು ಆ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತದೆ ಎಂದರು.

ಕಳೆದ 24 ತಾಸುಗಳಲ್ಲಿ ದಿಲ್ಲಿಯಲ್ಲಿ 10ಸಾವಿರಕ್ಕಿಂತ ಕಡಿಮೆ ಕೋವಿಡ್‌ ಪ್ರಕರಣಗಳು ಕಂಡುಬಂದಿವೆ. ಇತ್ತೀಚಿನ ದಿನಗಳಲ್ಲಿ ಇದೇ ಕಡಿಮೆ ಪ್ರಕರಣ ಎಂದು ಅವರು ತಿಳಿಸಿದರು.

ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸರ್ಕಾರಗಳು ಈ ಹಿಂದೆ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದವು. ಅಂತಹ ಮಕ್ಕಳಿಗೆ ಪ್ರತಿ ತಿಂಗಳು 5 ಸಾವಿರ ರೂ. ಪಿಂಚಣಿ ನೀಡುವುದಾಗಿ ಹೇಳಿದ್ದರು.

Exit mobile version