ಉಚಿತ ವಿದ್ಯುತ್ ಪಡೆಯಲು ಮಾರ್ಗಸೂಚಿ ಬಿಡುಗಡೆ ಮಾಡಿದ ಕಾಂಗ್ರೆಸ್ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗೃಹಜ್ಯೋತಿ ಯೋಜನಡೆಯಡಿ ಉಚಿತ ವಿದ್ಯುತ್ ಪಡೆಯಲು ಮಾರ್ಗಸೂಚಿಯನ್ನು ರಾಜ್ಯ (free electricity guidelines) ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ, ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಮೇಲೆ ಶೇಕಡಾ 10ರಷ್ಟು (free electricity guidelines) ಹೆಚ್ಚಿನ ಮಿತಿಯನ್ನು ಹಾಕಲಾಗಿದೆ.

ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ

ಇದನ್ನು ಓದಿ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

ತಿಂಗಳಿಂದ ನೀಡುವ ಬಿಲ್ಗೆ ಅನ್ವಯವಾಗುವಂತೆ ಜಾರಿಯಾಗಿದೆ. ಒಟ್ಟಾರೆಯಾಗಿ 200 ಯೂನಿಟ್ ಬದಲಾಗಿ ಬೇರೆ ರೀತಿಯ ಲೆಕ್ಕಾಚಾರದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ.

Siddaramaiah

ಮಾರ್ಗಸೂಚಿಗಳು
• ಈ ಯೋಜನೆಯು ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ

• ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ – ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಈ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.

• ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು ಹಾಗೂ ಗ್ರಾಹಕರು ನೆಟ್ ಬಿಲ್ ಪಾವತಿಸುವುದು

• ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.

• ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ, ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.

• ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

• ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು. ಗ್ರಾಹಕನಿಗೆ ನೀಡಿದ ಉಚಿತ ಮೊತ್ತವನ್ನು ಸರ್ಕಾರದಿಂದ ವಿದ್ಯತ್

ಸರಬರಾಜು ಕಂಪನಿಗಳಿಗೆ ಸಹಾಯಧನದ ಮೂಲಕ ಪಾವತಿಸಲಾಗುತ್ತದೆ.

• ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು

• ಜೂನ್ 30ರ ಒಳಗಡೆ ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸಬೇಕು.

Exit mobile version