ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ : ಸೆ.26 ಅರ್ಜಿ ಸಲ್ಲಿಸಲು ಕೊನೆ ದಿನ

Bengaluru: ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ (Free laptop for PUC students) ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ

ಉಚಿತ ಲ್ಯಾಪ್ಟಾಪ್ (Free laptop) ನೀಡಲು ಅರ್ಜಿ(Application)ಆಹ್ವಾನಿಸಲಾಗಿದೆ. ಪ್ರಥಮ ಅಥವಾ ದ್ವಿತೀಯ ಪಿಯುಸಿ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕರ ಮಕ್ಕಳು

(Children of construction workers) ಈ ಯೋಜನೆಯಡಿ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ. ಆದರೆ ಈ ಉಚಿತ ಲ್ಯಾಪ್ಟಾಪ್ ಯೋಜನೆ ಎಲ್ಲ ವಿದ್ಯಾರ್ಥಿಗಳಿಗಲ್ಲ. ಆಯ್ಕೆ ಆಗುವ ಕೆಲವು

ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ (Free laptop for PUC students) ನೀಡಲಾಗುವುದು.

ರಾಜ್ಯ ಕಾರ್ಮಿಕ ಇಲಾಖೆ (State Labor Department) ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಬೆಂಗಳೂರು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಾರ್ಯವ್ಯಾಪ್ತಿಯಲ್ಲಿ ನೋಂದಣಿ ಆಗಿರುವ ಕಟ್ಟಡ ಮತ್ತು

ನಿರ್ಮಾಣ ಕಾರ್ಮಿಕರ ಮಕ್ಕಳು ಈ ಯೋಜನೆಯ ಲಾಭ ಪಡೆಯಲು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು

ಅಗತ್ಯ ದಾಖಲೆಗಳೊಂದಿಗೆ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು :
• ಕಾರ್ಮಿಕ ಕಲ್ಯಾಣ ಮಂಡಳಿಯ (Labor Welfare Board) ನೋಂದಾವಣೆ ಪ್ರಮಾಣ ಪತ್ರ.
• ಪಿಯುಸಿ ಪ್ರವೇಶ ಪಡೆದಿರುವ ದಾಖಲೆ
• ಆಧಾರ್ ಕಾರ್ಡ್ಎರಡು ಭಾವಚಿತ್ರ
• ಜಾತಿ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಎಸ್ಎಸ್ಎಲ್ಸಿ ಅಂಕಪಟ್ಟಿ
• ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ, ಉಪ ವಿಭಾಗ-1, ಬೆಂಗಳೂರು, ಇಲ್ಲಿಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26, 2023 ಕೊನೆ ದಿನವಾಗಿರುತ್ತದೆ.

ವಿಳಾಸ : ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ಕಟ್ಟಡ, ಮೊದಲನೇ ಮಹಡಿ, ಮಂಜುನಾಥನಗರ, ಬಾಗಲಗುಂಟೆ ಬೆಂಗಳೂರು – 73

ಮೊಬೈಲ್ ಸಂಖ್ಯೆ – 9845587605 / 8105084941

ಇದನ್ನು ಓದಿ: ಚೈತ್ರಾ ಕುಂದಾಪುರ ಅರೆಸ್ಟ್‌: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಡೀಲ್ 7 ಕೋಟಿ ವಂಚನೆ ಆರೋಪ, ಸಿಸಿಬಿ ವಶಕ್ಕೆ

Exit mobile version