English English Kannada Kannada

ಭಗತ್ ಎಂಬ ಅಪ್ರತಿಮ ಹೋರಾಟಗಾರ

“ಕ್ರಾಂತಿ ಎಂದರೆ ಅದರಲ್ಲಿ ರಕ್ತಮಯ ಕಲಹ ಇರಬೇಕು ಎಂದೇನೂ ಇಲ್ಲ. ಹಾಗೆಯೇ ವೈಯುಕ್ತಿಕ ದ್ವೇಷಕ್ಕೂ ಇದರಲ್ಲಿ ಅವಕಾಶ ಇಲ್ಲ. ಅದು ಬಾಂಬ್ ಮತ್ತು ಪಿಸ್ತೂಲುಗಳ ಸಂಸ್ಕೃತಿ ಅಲ್ಲ. ನಮ್ಮ ಪ್ರಕಾರ ಕ್ರಾಂತಿ ಎಂದರೆ ಎದ್ದು ಕಾಣುವ ಅನ್ಯಾಯದಿಂದ ಕೂಡಿದ ಈಗಿನ ವ್ಯವಸ್ಥೆ ಬದಲಾಗಬೇಕು” -ಭಗತ್ ಸಿಂಗ್
Share on facebook
Share on google
Share on twitter
Share on linkedin
Share on print
  • ಪ್ರೀತಮ್ ಹೆಬ್ಬಾರ್

ಭಗತ್ ಸಿಂಗ್ ಎಂದೊಡನೆ ನಮಗೆ ನೆನಪಾಗುವುದು ಇಂಕ್ವಿಲಾಬ್ ಜಿಂದಾಬಾದ್ ಎಂಬ ದೇಶಭಕ್ತಿ ಘೋಷಣೆ . ಇಂದು ಭಾರತ ಮಾತೆಯ ಹೆಮ್ಮೆಯ ಪುತ್ರ ಭಗತ್ ಸಿಂಗ್ ಅವರ 114 ನೇ ಜನ್ಮದಿನ. ಈ ಮಹಾನ್ ಹೋರಾಟಗಾರನ ಪಾದ ಚರಣಗಳಿಗೆ ನಮ್ಮದೊಂದು ಸಲಾಂ.

ಭಗತ್ ಸಿಂಗ್ 1907 ಸೆಪ್ಟೆಂಬರ್ 28 ರಂದು ಈಗಿನ ಪಾಕಿಸ್ತಾನದ ಲಾಯಲ್ಪುರ್ ಜಿಲ್ಲೆಯ ಜರಾನ್ ವಾಲಾ ತಾಲ್ಲೂಕಿನಲ್ಲಿರುವ ಬಂಗಾ ಹಳ್ಳಿಯಲ್ಲಿ ಜನಿಸಿದರು.

ಬ್ರಿಟಿಷರ ಅಧಿನದಲ್ಲಿದ್ದ ಭಾರತವನ್ನು ಅವರ ಮುಷ್ಟಿಯಿಂದ ಮುಕ್ತಗೊಳಿಸಲು ಕ್ರಾಂತಿಕಾರಿ ಮಾರ್ಗ ಅನುಸರಿಸಿದ್ದ ಯುವ ವೀರ ಸೇನಾನಿ ಭಗತ್ ಸಿಂಗ್ ಇವರ ಈ ಹೋರಾಟದ ಹಾದಿ ಎಷ್ಟೋ ಯುವ ಜನತೆಗೆ ಪ್ರೇರಣೆಯಾಯಿತು.

ಏಪ್ರಿಲ್ 13, 1919ರಂದು ನಡೆದ ಜಲಿಯನ್ ವಾಲಾ ಬಾಗ್ ದುರಂತ ನಡೆದ ದಿನ ಶಾಲೆಯಿಂದ ತಪ್ಪಿಸಿಕೊಂಡ ಹೋದ ಭಗತ್ ಸಿಂಗ್ ದುರಂತ ನಡೆದ ಸ್ಥಳಕ್ಕೆ ಹೋಗಿ ಖಾಲಿ ಬಾಟಲಿಯಲ್ಲಿ ರಕ್ತಸಿಕ್ತವಾಗಿದ್ದ ಮಣ್ಣನ್ನು ತುಂಬಿಕೊಂಡು ಬಂದಿದ್ದ. ನಂತರ ಅದನ್ನು ಪ್ರತಿದಿನವೂ ಪೂಜಿಸುತ್ತಿದ್ದರು. ಬಾಲ್ಯದಲ್ಲಿ ಭಗತ್ ಸಿಂಗ್ ಬ್ರಿಟಿಷರೊಂದಿಗೆ ಹೋರಾಟ ನಡೆಸಲು ಹೊಲಗದ್ದೆಗಳಲ್ಲಿ ಭತ್ತದ ಬದಲು ಬಂದೂಕುಗಳನ್ನು ಬೆಳೆಯಬೇಕೆಂದು ಹೇಳುತ್ತಿದ್ದರು.

ನ್ಯಾಶನಲ್ ಕಾಲೇಜಿನಲ್ಲಿ ಓದುತ್ತಿದ್ದಾಗ ಭಗತ್ ಸಿಂಗ್ ಚಂದ್ರಶೇಖರ್ ಆಜಾದ್ ಅವರ ಹಿಂದೂಸ್ತಾನ್ ರಿಪಬ್ಲಿಕನ್ ಅಸೋಸಿಯೇಶನ್ ಸೇರಿ ಕ್ರಾಂತಿಕಾರಿ ಚಳವಳಿಯಲ್ಲಿ ಭಾಗವಹಿಸಿದರು. ಭಗತ್ ಸಿಂಗ್ ಹೆಚ್‌ಆರ್‌ಎ ಅನ್ನು ಹಿಂದೂಸ್ಥಾನ್ ಸೋಷಿಯಲಿಸ್ಟ್ ರಿಪಬ್ಲಿಕನ್ ಅಸೋಸಿಯೇಶನ್ ಎಂದು ಮರು ನಾಮಕರಣ ಮಾಡಿದ್ದರು.

ಭಗತ್ ಸಿಂಗ್ ಅವರ ಪ್ರಮುಖ ಮಾತುಗಳಲ್ಲಿ

“ಕ್ರಾಂತಿ ಎಂದರೆ ಅದರಲ್ಲಿ ರಕ್ತಮಯ ಕಲಹ ಇರಬೇಕು ಎಂದೇನೂ ಇಲ್ಲ. ಹಾಗೆಯೇ ವೈಯುಕ್ತಿಕ ದ್ವೇಷಕ್ಕೂ ಇದರಲ್ಲಿ ಅವಕಾಶ ಇಲ್ಲ. ಅದು ಬಾಂಬ್ ಮತ್ತು ಪಿಸ್ತೂಲುಗಳ ಸಂಸ್ಕೃತಿ ಅಲ್ಲ. ನಮ್ಮ ಪ್ರಕಾರ ಕ್ರಾಂತಿ ಎಂದರೆ ಎದ್ದು ಕಾಣುವ ಅನ್ಯಾಯದಿಂದ ಕೂಡಿದ ಈಗಿನ ವ್ಯವಸ್ಥೆ ಬದಲಾಗಬೇಕು”

ಈ ಮಾತು ಹಲವಾರು ಯುವ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹತ್ತಿ, ಹಲವಾರು ಯುವಕರು ಸ್ವಾತಂತ್ರ್ಯ ಚಳುವಳಿಯಲ್ಲಿ ಧುಮುಕಿದರು.

ಸೈಮನ್ ಆಯೋಗದ ವಿರುದ್ಧ ರಣಕಹಳೆ

1928 ರಲ್ಲಿ ಸೈಮನ್ ಕಮಿಷನ್ ಭಾರತಕ್ಕೆ ಆಗಮಿಸಿತು. ಭಾರತದ ಮುಂದಿನ ದಿಶೆಯನ್ನು ನಿರ್ಧರಿಸುವುದು ಈ ಮಂಡಲದ ಉದ್ದೇಶವಾಗಿತ್ತು. ಭಾರತದಾದ್ಯಂತ ಈ ಮಂಡಲಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು. ಲಾಲಾ ಲಜಪತ ರಾಯ್ ನೇತೃತ್ವದಲ್ಲಿ ಜನರು ‘ಸೈಮನ್ ಗೋ ಬ್ಯಾಕ್’ (ಸೈಮನ್ ಹಿಂದಿರುಗು) ಎಂದು ನಿಷೇಧ ಯಾತ್ರೆಯೊಂದಿಗೆ ಬೀದಿಗಿಳಿದರು! ಪರಿಸ್ಥಿತಿಯನ್ನು ನಿಯಂತ್ರಿಸಲು ಆಂಗ್ಲ ಅಧಿಕಾರಿಗಳು ನೆರೆದವರ ಮೇಲೆ ಅಮಾನುಷ ಲಾಠಿ ಪ್ರಹಾರ ಮಾಡಿಸಿದರು. ಇದರಲ್ಲಿ ಲಾಲಾ ಲಜಪತ ರಾಯ್ ಅಸುನೀಗಿದರು. ಇದನ್ನು ಸಹಿಸದ ಕ್ರಾಂತಿಕಾರಿಗಳು, ಲಾಲಾಜಿ ಸಾವಿಗೆ ಕಾರಣನಾದ ಆಂಗ್ಲ ಅಧಿಕಾರಿ ಸ್ಕಾಟ್ ನನ್ನು ಕೊಲ್ಲುವ ನಿರ್ಧಾರ ಮಾಡಿದರು. ಅದರಂತೆ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಸೇರಿ ಸ್ಕಾಟ್ ನಿವಾಸದ ಹೊರಗೆ ಹೊಂಚು ಹಾಕಿದರು. ಆದರೆ ಸ್ಕಾಟ್ ಬದಲು ಸೌಂಡರ್ಸ್ ಎಂಬ ಇನ್ನೋರ್ವ ಕ್ರೂರ ಅಧಿಕಾರಿಯು ಭಗತ್ ಸಿಂಗ್ ಹಾರಿಸಿದ ಗುಂಡಿಗೆ ಬಲಿಯಾದನು.

ಹತ್ಯೆಯ ನಂತರ ಅವರು ಕೈ ಹಾಕಿದ ಯೋಜನೆ ಬ್ರಿಟಿಶ್ ಸರ್ಕಾರದ ಡಿಫೆನ್ಸ್ ಆಕ್ಟ್ ಅನ್ನು ವಿರೋಧಿಸಿ ‘ಅಸೆಂಬ್ಲಿಯಲ್ಲಿ ಬಾಂಬ್ ಹಾಕುವುದು,ಮತ್ತು ಪೊಲೀಸರಿಗೆ ಭಗತ್ ಸಿಂಗ್ ಶರಣಾಗುವುದು!’.ಭಗತ್ ಸಿಂಗ್ ಏಕೆ ಅಲ್ಲಿ ಬಾಂಬ್ ಹಾಕಬೇಕು ಮತ್ತೆ ಶರಣಾಗಬೇಕು ಎಂದು ಉಳಿದ ಕ್ರಾಂತಿಕಾರಿಗಳು ಕೇಳಿದ್ದಕ್ಕೆ “ಕಿವುಡರಿಗೆ ಕೇಳಿಸುವಂತೆ ಮಾಡಲು ಭಾರಿ ಸದ್ದನ್ನೇ ಮಾಡಬೇಕು.ಹಾಗೆ ಮುದುಡಿ ಮಲಗಿರುವ ದೇಶದ ಜನರನ್ನ ಕ್ರಾಂತಿಯ ಅವಿಸ್ಸಿನಿಂದ ಬಡಿದ್ದೆಬ್ಬಿಸಬೇಕು ಎಂದು ಭಗತ್ ಸಿಂಗ್ ಹೇಳಿದ್ದರು.

23 ನೇ ವರ್ಷಕ್ಕೆ ಹುತಾತ್ಮರಾದ ವೀರ ಯೋಧ

ಮಾರ್ಚ್ 23, 1931ರಂದು ಭಗತ್ ಸಿಂಗ್ ಮತ್ತು ಅವರ ಸಹಚರರಾದ ರಾಜಗುರು ಮತ್ತು ಸುಖದೇವ್ ಅವರನ್ನು ಗಲ್ಲಿಗೇರಿಸಲಾಯಿತು.

Submit Your Article