ಜೂ. 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಸಂಚಾರ ಆರಂಭ

ಬೆಂಗಳೂರು, ಜೂ.17: ಸದ್ಯ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಹೀಗಾಗಿ ಜೂನ್​ 14ರಿಂದ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಮೊದಲನೇ ಹಂತದ ಅನ್​ಲಾಕ್​ ಜಾರಿಗೊಳಿಸಲಾಗಿದ್ದು, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಲಾಗಿದೆ. ಜೂನ್ 21ರಿಂದ 2ನೇ ಹಂತದ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಲಿದೆ. ​ ಆಗ ಇನ್ನೂ ಹೆಚ್ಚಿನ ವಿನಾಯಿಯಿ ಸಿಗುತ್ತೆ ಎನ್ನಲಾಗುತ್ತಿದೆ. ಲಾಕ್​ಡೌನ್​ ಕಾರಣದಿಂದ ಸಂಚಾರ ಸ್ಥಗಿತಗೊಳಿಸಿದ್ದ ಬಿಎಂಟಿಸಿ ಬಸ್​ಗಳು ಜೂನ್​ 21ರಿಂದ ಕಾರ್ಯಾಚರಣೆ ಆರಂಭಿಸಲಿವೆ ಎನ್ನಲಾಗುತ್ತಿದೆ.

ಹೌದು, ಜೂನ್​​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳು ಸಂಚಾರ ಆರಂಭಿಸಲಿವೆ. ಸದ್ಯ ರಾಜ್ಯ ರಾಜಧಾನಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಜೊತೆಗೆ ಮೊದಲ ಹಂತದ ಅನ್​ಲಾಕ್​ ಕೂಡ ಮಾಡಲಾಗಿದೆ. ಇದೇ ಸೋಮವಾರದಿಂದ ಎರಡನೇ ಹಂತದ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಲಿದೆ. ಅಂದಿನಿಂದ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಮೊದಲ ಹಂತದ ಲಾಕ್​ಡೌನ್​​​ ಸಡಿಲಿಕೆ ವೇಳೆ ಬಿಬಿಎಂಪಿ ಸಾರ್ವಜನಿಕ ಸಾರಿಗೆಗೆ ವಿನಾಯಿತಿ ಬೇಡ ಎಂದಿತ್ತು. ಸಾರ್ವಜನಿಕ ಸಾರಿಗೆಗೆ ಅವಕಾಶ ನೀಡಿದ್ರೆ ಸೋಂಕು ಹೆಚ್ಚಳವಾಗಲಿದೆ. ಹೀಗಾಗಿ ಸದ್ಯಕ್ಕೆ ಬಸ್​ ಸಂಚಾರಕ್ಕೆ ಅನುಮತಿ ಬೇಡ ಎಂದು ಪಾಲಿಕೆ ಸರ್ಕಾರಕ್ಕೆ ಮನವಿ ಮಾಡಿತ್ತು.

ನಗರದಲ್ಲಿ ಬಿಎಂಟಿಸಿ ಬಸ್​ಗಳನ್ನ ರಸ್ತೆಗಿಳಿಸಲು ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಒತ್ತಡ ಕೇಳಿ ಬಂದಿತ್ತು.  ಬಿಬಿಎಂಪಿ ವ್ಯಾಪ್ತಿಯಲ್ಲಿ ಬಸ್​ ಸಂಚಾರಕ್ಕೆ ಅವಕಾಶ ನೀಡುವಂತೆ ಬಿಬಿಎಂಪಿ ಮೇಲೆ ಒತ್ತಡ ಇತ್ತು. ಸದ್ಯ ಒತ್ತಡಕ್ಕೆ ಮಣಿದಿರುವ ಬಿಬಿಎಂಪಿ ಬಸ್​ ಸಂಚಾರ ಮರು ಪ್ರಾರಂಭಿಸುವ  ನಿರ್ಧಾರ ತೆಗೆದುಕೊಂಡಿದೆ. ಸೋಮವಾರದಿಂದ ನಗರದಲ್ಲಿ ಬಸ್​ ಸಂಚಾರಕ್ಕೆ ಅನುಮತಿ ನೀಡಲು ನಿರ್ಧಾರ ಮಾಡಿದೆ.

ಬಸ್​ಗಳಿಗೆ ಅನುಮತಿ ನೀಡಿದ್ರೆ ಏನೆಲ್ಲಾ ಷರತ್ತುಗಳನ್ನ ವಿಧಿಸಬೇಕು ಎಂಬ ಬಗ್ಗೆ ಮುಖ್ಯ ಆಯುಕ್ತ ಗೌರವ್​ ಗುಪ್ತಾ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದೆ.  ಅಧಿಕಾರಿಗಳ ಅಭಿಪ್ರಾಯ ಪಡೆದು ಷರತ್ತುಬದ್ಧ ಅನುಮತಿ ನೀಡಲು ಬಿಬಿಎಂಪಿ ಒಪ್ಪಿಗೆ ಕೊಟ್ಟಿದೆ. ಈ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಬಿಎಂಟಿಸಿ ಎಂಡಿ ಜತೆ ಮಾತುಕತೆ ನಡೆದಿದೆ. ಜತೆಗೆ ಗೌರವ್​ ಗುಪ್ತಾ ಅವರು ನಗರ ಪೊಲೀಸ್​ ಕಮಿಷನರ್​, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಯೂ ಚರ್ಚಿಸಿದ್ದಾರೆ.

ಏನೆಲ್ಲಾ ಷರತ್ತುಗಳೊಂದಿಗೆ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲು ಬಿಬಿಎಂಪಿ ಮುಂದಾಗಿದೆ. ಆ ಷರತ್ತುಗಳು ಈ ಕೆಳಗಿನಂತಿವೆ:

ಇನ್ನು, ಅನ್​​ಲಾಕ್​ ಆದ ಬಳಿಕ ಬಿಎಂಟಿಸಿ ಟಿಕೆಟ್​ ದರ ಏರಿಕೆ ಆಗುತ್ತದೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ಕೂಡ ನೀಡಿದ್ದರು. ಟಿಕೆಟ್​ ದರದಲ್ಲಿ ಯಾವುದೇ ಏರಿಕೆ ಇಲ್ಲ . ಅಧಿಕಾರಿಗಳು ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದತು. ಬಡವರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಅವರ ಮೇಲೆ ಮತ್ತೆ ಹೊರೆ ಹಾಕುವುದಿಲ್ಲ. ಟಿಕೆಟ್​ ದರ ಏರಿಕೆ ಮಾಡಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದರು.

Exit mobile version