ವಾಣಿಜ್ಯ ಮಂಡಳಿಯಿಂದ ಮುಖ್ಯಮಂತ್ರಿಗೆ ಮನವಿ

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಮನವಿಯೊಂದನ್ನು ನೀಡಲಾಗಿದ್ದು, ಶೇ.100ರಷ್ಟು ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ವಿನಂತಿಸಲಾಗಿದೆ.

ಕೋವಿಡ್ 19 ಹಿನ್ನೆಲೆಯಲ್ಲಿ ಸರಕಾರವು ರಾಜ್ಯದ ಬೇರೆ ಬೇರೆ ಉದ್ಯಮಗಳಿಗೆ ಶೇ.100 ರಷ್ಟು ವಿನಾಯಿತಿ ನೀಡಿದೆ. ಆದರೆ ಜುಲೈ 19 ರಿಂದ ಚಲನಚಿತ್ರ ಮಂದಿರಗಳಲ್ಲಿ ಶೇ.50 ರಷ್ಟು ಆಸನಗಳಿಗಷ್ಟೇ ಚಿತ್ರ ಪ್ರದರ್ಶನ ಅನುಮತಿ ನೀಡಲಾಗಿರುತ್ತದೆ. ಸಂಕಷ್ಟದಲ್ಲಿರುವ ಚಿತ್ರಮಂದಿರಗಳಿಗೆ ಇದು ಇನ್ನಷ್ಟು ಕಷ್ಟ ನೀಡಿದೆಯೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿಪ್ರಾಯ ಪಟ್ಟಿದೆ.

ಇತ್ತೀಚೆಗೆ ತೆಲಂಗಾಣ ಮತ್ತು ಆಂದ್ರಪ್ರದೇಶ ಸರಕಾರಗಳು ಅಲ್ಲಿನ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಆಸನಗಳಲ್ಲಿ ಚಿತ್ರಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ. ನಮ್ಮ ರಾಜ್ಯದಲ್ಲಿ ಅರ್ಧಕ್ಕೆ ಸೀಮಿತ ಗೊಳಿಸಿರುವ ಕಾರಣ ಬಿಡುಗಡೆಗೆ ಸಿದ್ಧವಾಗಿರುವ ದೊಡ್ಡ ಬಜೆಟ್ ಚಿತ್ರಗಳು ತೆರೆಗೆ ಬರುತ್ತಿಲ್ಲ. ಈಗಾಗಲೇ ಚಿತ್ರೋದ್ಯಮವು ಅದರಲ್ಲೂ ನಿರ್ಮಾಪಕರು, ವಿತರಕರು, ಪ್ರದರ್ಶಕರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಹಾಗಾಗಿ ನೆರೆ ರಾಜ್ಯಗಳಂತೆ ಕರ್ನಾಟಕದಲ್ಲಿಯೂ ಚಿತ್ರ ಮಂದಿರಗಳ ಪೂರ್ತಿ ಆಸನಗಳಿಗೆ ಪ್ರದರ್ಶನ ನೀಡುವಂತೆ ಆದೇಶ ಹೊರಡಿಸಬೇಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜಯರಾಜ್, ಉಪಾಧ್ಯಕ್ಷ ಉಮೇಶ್ ಬಣಕಾರ್ ಮತ್ತು ಗೌರವ ಕಾರ್ಯದರ್ಶಿ ಎನ್.ಎಂ. ಸುರೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Exit mobile version