ಬಿ.ಎಸ್. ಯಡಿಯೂರಪ್ಪ ರಾಜಿನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ: ಅಭಿಮಾನ ಅತಿರೇಕಕ್ಕೆ ಹೋಗದಂತೆ ಯಡಿಯೂರಪ್ಪ ಕೈಮುಗಿದು ವಿನಂತಿ

ಚಾಮರಾಜನಗರ ಜು 27: ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ತೀವ್ರ ಮನನೊಂದ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳೀಯ ನಿವಾಸಿ ರವಿ(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯಡಿಯೂರಪ್ಪ ರಾಜೀನಾಮೆ ನೀಡಿದ ವಿಚಾರ ತಿಳಿದ ನಂತರ ತೀವ್ರ ಮನನೊಂದಿದ್ದರು. ಹೋಟೆಲ್ ಉದ್ಯೋಗಿಯಾಗಿದ್ದ ರವಿ ಹೋಟೆಲ್ ನಲ್ಲೇ ಸೋಮವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಡಿಯೂರಪ್ಪ ಸಂತಾಪ: ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Exit mobile version