Belgaum: ರಾಮ ಭಕ್ತರಾಗಿದ್ದ, ಶುದ್ಧಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು (Mahatma Gandhi) ಬಿಜೆಪಿ (BJP) ಪರಿವಾರದ ಗೋಡ್ಸೆ (Godse) ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಹೇಳಿದ್ದಾರೆ.

ಗಾಂಧಿ ಭಾರತ (Gandhi India) ಕಾರ್ಯಕ್ರಮದ ಅಂಗವಾಗಿ ಬೆಳಗಾವಿಯ ಸುವರ್ಣಸೌಧದ (Suvarnasoudha, Belgaum) ಆವರಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ (Anti-constitutional) ಮತ್ತು ಅಂಬೇಡ್ಕರ್ (Ambedkar) ದ್ವೇಷಿಯೂ ಆಗಿದೆ. ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ (Gram Swaraj) ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದಿದ್ದಾರೆ.
ಇದೇ ವೇಳೆ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ (Jai Bapu-Jai Bhim- Jai Constitution) ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ (RSS) ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು. ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ. ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ. ನಾವು ಸಂವಿಧಾನ (Constitution) ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ (Election) ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ ಅಂಬೇಡ್ಕರ್ ಅವರ ಆಶಯಗಳು (Wishes of Gandhi Ambedkar), ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ (Budget) ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದಿದ್ದಾರೆ.